Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 22 ರಿ೦ದ ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಆಸ್ಟ್ರೇಲಿಯಾದಲ್ಲಿ ಗುಂಡಿನ ದಾಳಿ; ಹಲವರು ಗಂಭೀರ, ಭಯೋತ್ಪಾದನೆ ಕೃತ್ಯವಲ್ಲ ಎಂದ ಸರ್ಕಾರ

ಮೆಲ್ಬೋರ್ನ್: ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ದುಷ್ಕರ್ಮಿಯೋರ್ವ ನಡೆಸಿರುವ ಶೂಟಿಂಗ್ ನಲ್ಲಿ ಹತ್ತಾರು ಮಂದಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರು ಗಂಭೀರವಾಗಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಟ್ರೇಲಿಯಾದ ಎರಡನೇ ದೊಡ್ಡ ನಗರವಾದ ಮೆಲ್ಬೋರ್ನ್ ನಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅಲ್ಲಿನ ನೈಟ್ ಕ್ಲಬ್ ವೊಂದರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕ್ಲಬ್ ನಲ್ಲಿದ್ದ ಹತ್ತಾರು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

ವೀಕೆಂಡ್ ಆದ್ದರಿಂದ ಕ್ಲಬ್ ನಲ್ಲಿ ಸಾಕಷ್ಟು ಮಂದಿ ಇದ್ದರು. ಹೀಗಾಗಿ ಗಾಯಾಳುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ. ಅಂತೆಯೇ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಇನ್ನು ಘಟನೆ ಭಯೋತ್ಪಾದಕ ಕೃತ್ಯವಲ್ಲ ಎಂದು ಹೇಳಿರುವ ಸ್ಥಳೀಯ ಜಿಲ್ಲಾಡಳಿತ ಇದು ದುಷ್ಕರ್ಮಿಗಳ ಕೃತ್ಯ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನು 1996ರಲ್ಲಿ ಇದೇ ಮೆಲ್ಬೋರ್ನ್ ನಲ್ಲಿ ನಡೆದಿದ್ದ ಶೂಟಿಂಗ್ ನಲ್ಲಿ 35 ಮಂದಿ ಅಸು ನೀಗಿದ್ದರು.

No Comments

Leave A Comment