Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಐತಿಹಾಸಿಕ ನೊಟ್ರೆ ಡೇಮ್ ಕ್ಯಾಥೆಡ್ರಲ್ ಕಟ್ಟಡಕ್ಕೆ ಬೆಂಕಿ, ಕುಸಿದು ಬಿದ್ದ ಕಟ್ಟಡದ ಭಾಗಗಳು!

ಪ್ಯಾರಿಸ್​: ಪ್ಯಾರಿಸ್​ನ ಐತಿಹಾಸಿಕ ಕಟ್ಟಡ ನೊಟ್ರೆ ಡೇಮ್ ಕ್ಯಾಥೆಡ್ರಲ್​ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ಕಟ್ಟಡದ ಕೆಲ ಪ್ರಮುಖ ಭಾಗಗಳು​ ಕುಸಿದು ಬಿದ್ದಿವೆ.

ಮೂಲಗಳ ಪ್ರಕಾರ ಈ ಐತಿಹಾಸಿಕ ಕಟ್ಟಡದ ನವೀಕರಣ ಕೆಲಸಗಳು ನಡೆಯುತ್ತಿದ್ದವು. ಈ ವೇಳೆ ಚಿಕ್ಕದಾಗಿ ಕಾಣಿಸಿಕೊಂಡ ಬೆಂಕಿ ಕ್ಷಣ ಮಾತ್ರದಲ್ಲಿ ಎಲ್ಲಕಡೆ ಹಬ್ಬಿದೆ. ಬೆಂಕಿ ನಂದಿಸಲು ಅಗ್ನಿಶಾಮಕದ ದಳದ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಬೆಂಕಿಯನ್ನು ನಿಯಂತ್ರಣ ಮಾಡುವುದು ಕಷ್ಟದ ಕೆಲಸ. ಆದರೂ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.

No Comments

Leave A Comment