Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಗೋಕರ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅನಿಲ್ ಕುಂಬ್ಳೆ ದಂಪತಿ

ಗೋಕರ್ಣ: ಖ್ಯಾತ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ದಂಪತಿ ಭಾನುವಾರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಶಿವನ ಆತ್ಮಲಿಂಗಕ್ಕೆ ವಿಶೇಷ ಪೂಜೆ ಅಭಿಷೇಕ ನೆರವೇರಿಸಿದರು.

ಮಹಾಬಲೇಶ್ವರನ ಆತ್ಮಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಪೂಜೆ ಮತ್ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು. ದಂಪತಿಗೆ ದೇವಾಲಯದ ಅರ್ಚಕರು ಸ್ಮರಣಿಕೆ ನೀಡಿ ಗೌರವಿಸಿದರು.

ವೇದಮೂರ್ತಿ ವಿಶ್ವನಾಥ ಭಟ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಳದ ಸದಸ್ಯರು ಉಪಸ್ಥಿತರಿದ್ದರು.

No Comments

Leave A Comment