Log In
BREAKING NEWS >
ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ...

ಬೆಸ್ಟ್ ಆಫ್ ಲಕ್: SSLC ಪರೀಕ್ಷಾ ಫಲಿತಾಂಶ ಮೇ 2ರಂದು ಪ್ರಕಟ

ಬೆಂಗಳೂರು: ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಮೇ 2ರಂದು ಪ್ರಕಟವಾಗಲಿದ್ದು, ಮೇ 3ರಂದು ಆಯಾಯ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ಅವರು ಸೋಮವಾರ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 22ರಿಂದ ಏಪ್ರಿಲ್ 4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. ಪ್ರಶ್ನೆ ಪತ್ರಿಕೆ ತಿದ್ದುವ ಕಾರ್ಯ ಪೂರ್ಣಗೊಂಡಿದ್ದು, ಮೇ 2ರಂದು ಪ್ರೌಢಶಿಕ್ಷಣ ಮಂಡಳಿ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ.

ಫಲಿತಾಂಶವನ್ನು ಈ ವೆಬ್ ಸೈಟ್ ನಲ್ಲಿ ಲಭ್ಯ; www.karresults.nic.in,  www.kaceb.kar.nic.in

ಉತ್ತೀರ್ಣರಾದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶದ ಎಸ್ಸೆಎಂಎಸ್ ಪೋಷಕರಿಗೆ ಕಳುಹಿಸಲಾಗುವುದು ಎಂದು ವಿ.ಸುಮಂಗಲಾ ವಿವರಿಸಿದ್ದಾರೆ.

No Comments

Leave A Comment