Log In
BREAKING NEWS >
ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ...

ದೆಹಲಿಯಲ್ಲಿ ಹೊತ್ತಿ ಉರಿದ ನಾಲ್ಕು ಕೆಮಿಕಲ್ ಫ್ಯಾಕ್ಟರಿ

ನವದೆಹಲಿ: ಪಶ್ಚಿಮ ದೆಹಲಿಯಲ್ಲಿ ನರೈನಾ  ಪ್ರದೇಶದಲ್ಲಿ ಸೋಮವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಕೆಮಿಕಲ್ ಫ್ಯಾಕ್ಟರಿಗಳು ಹೊತ್ತಿ ಉರಿದಿವೆ ಎಂದು ಅಗ್ನಿ ಶಾಮಕ ದಳದ ಹಿರಿಯ ಅಧಿಕಾರಿಗಳು ತಿಳಿಸಿದ್ದರೆ.

ಅಗ್ನಿ ದುರಂದಲ್ಲಿ ಯಾವುದೇ ಸಾವು ಸಂಭವಿಸಿದ ಬಗ್ಗೆ ಇದುವರೆಗೂ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಸ್ಥಳಕ್ಕೆ 30 ಅಗ್ನಿ ಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ನರೈನಾ ಕೈಗಾರಿಕಾ ಪ್ರದೇಶದ ಪಾಯಲ್ ಸಿನೆಮಾ ಹಿಂಭಾಗದಲ್ಲಿರುವ ನಾಲ್ಕು ಫ್ಯಾಕ್ಟರಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಿಯಂತ್ರಿಸುವ ಕಾರ್ಯ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

No Comments

Leave A Comment