Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ತಿಪಟೂರು: ಮರಕ್ಕೆ ಕಾರು ಡಿಕ್ಕಿ, ಸಿಇಟಿ ಪರೀಕ್ಷೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಸಿಇಟಿ ಪರೀಕ್ಷೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು, ತಿಪಟೂರು ತಾಲೂಕಿನ  ಕೆ.ಬಿ. ಕ್ರಾಸ್‌ನ ಕುಂದೂರು ಪಾಳ್ಯದಲ್ಲಿ ನಡೆದ ಅಪಘಾತದಲ್ಲಿ ವಿದ್ಯಾರ್ಥಿಗಳಾದ ಕಿರಣ್ (18) ಹಾಗೂ ತ್ರಿನೇಶ್ (20)  ಎಂಬುವವರು ಸಾವಿಗೀಡಾಗಿದ್ದಾರೆ.

ಮೃತ ವಿದ್ಯಾರ್ಥಿಗಳು ದಂಡಿನಶಿವರ ಗ್ರಾಮದ ನಿವಾಸಿಗಳಾಗಿದ್ದು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿಕ್ಕಾಗಿ ಚಿಕ್ಕಮಗಳೂರಿನತ್ತ ತೆರಳುತ್ತಿದ್ದರು.

ಅಪಘಾತದ ವೇಳೆ ಕಾರಿನಲ್ಲಿದ್ದ ಇನ್ನೂ ಮೂವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ತುರುವೇಕೆರೆ ಮತ್ತು ದಂಡಿನಶಿವರ ಸರ್ಕಾರಿ ಆಸ್ಪತ್ರೆಗೆ ದಾಕಲಿಸಲಾಗಿದೆ.

ಸೋಮವಾರ ಬೆಳಿಗ್ಗೆ 10.30ಕ್ಕೆ ಪರೀಕ್ಷೆ ಇದ್ದ ಕಾರಣ  ಆದಷ್ಟು ಶೀಘ್ರ ಪರೀಕ್ಷಾ ಕೇಂದ್ರಕ್ಕೆ ತಲುಪಬೇಕಾಗಿ ಕಾರನ್ನು ಅತಿಯಾದ ವೇಗದಿಂದ ಓಡಿಸಲಾಗುತ್ತಿತ್ತು. ಈ ಅತಿ ವೇಗವೇ ಅಪಘಾತಕ್ಕೆ ಕಾರಣವಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

ಘಟನೆ ಸಂಬಂಧ ಕೆಬಿ ಕ್ರಾಸ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

No Comments

Leave A Comment