Log In
BREAKING NEWS >
ಜುಲಾಯಿ 4ಕ್ಕೆ ಅದಮಾರು ಮಠದ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ....

ಮೈಸೂರು: ಗಾನಕೋಗಿಲೆ ಎಸ್.ಜಾನಕಿ ಆಸ್ಪತ್ರೆಗೆ ದಾಖಲು

ಮೈಸೂರು: ಗಾನಕೋಗಿಲೆ ಎಸ್ ಜಾನಕಿ ಅವರು ಕಾಲು ಜಾರಿ ಬಿದ್ದಿದ್ದರಿಂದ ಅವರ ಸೊಂಟಕ್ಕೆ ಗಾಯವಾಗಿದ್ದು ಅವರನ್ನು ಕೂಡಲೇ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾನಕಿ ಅವರು ಮೈಸೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ. ಈ ವೇಳೆ ಅವರ ಸೊಂಟ ಮುರಿದಿದೆ. ತೀವ್ರ ನೋವು ಕಾಣಿಸಿಕೊಂಡಿದ್ದು ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಮೂರು ದಿನಗಳಿಂದ ಜಾನಕಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ವರ್ಷದ ಹಿಂದೆ ಜಾನಕಿ ಅವರು ತಮ್ಮ ಗಾಯನವನ್ನು ನಿಲ್ಲಿಸುವ ನಿರ್ಧಾರವನ್ನು ತಿಳಿಸಿದ್ದರು.

ಸದ್ಯ ಒಂದು ವರ್ಷಗಳಿಂದ ವಿಶ್ರಾಂತಿ ಜೀವನವನ್ನು ನಡೆಸುತ್ತಿರುವ ಜಾನಕಿ ಅವರು ಸಂಬಂಧಿಕರ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ.

No Comments

Leave A Comment