Log In
BREAKING NEWS >
ಮಹಾರಾಷ್ಟ್ರದಲ್ಲಿ ಸರಕಾರಿ ನೌಕರರಿಗೆ ಉದ್ಧವ್‌ ಬಂಪರ್‌ ಗಿಫ್ಟ್‌: ವಾರಕ್ಕೆ ಐದು ದಿನ ಮಾತ್ರ ಕೆಲಸ...

ಮೆಟ್ರೋ ನಿಲ್ದಾಣದಲ್ಲಿ ಶಂಕಿತ ಉಗ್ರ?; ತಪಾಸಣೆ ವೇಳೆ ಪರಾರಿ !

ಬೆಂಗಳೂರು: ನಗರದ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣದಲ್ಲಿ ಸೋಮವಾರ ಸಂಜೆ 7.30 ರ ವೇಳೆಗೆ ಆಗಂತುಕನೊಬ್ಬ ತಪಾಸಣೆ ವೇಳೆ ಪರಾರಿಯಾಗಿರುವ ಘಟನೆ ನಡೆದಿದ್ದು,ಆತಂಕಕ್ಕೆ ಕಾರಣವಾಗಿದೆ.

ಶಂಕಿತ ವ್ಯಕ್ತಿಯನ್ನು ಭದ್ರತಾ ಸಿಬಂದಿ ತಪಾಸಣೆ ಮಾಡುತ್ತಿದ್ದ ವೇಳೆ ಸೊಂಟದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದ್ದು, ಸೆನ್ಸಾರ್‌ ಅಲರ್ಟ್‌ ಆಗಿದೆ. ಆತನನ್ನು ಪಕ್ಕಕ್ಕೆ ನಿಲ್ಲಿಸಿ ಹೆಚ್ಚುವರಿ ಭದ್ರತಾ ಸಿಬಂದಿಯನ್ನುಕರೆಯಲು ಮುಂದಾದಾಗ ಆತ ಗೇಟ್‌ ಹಾರಿ ಪರಾರಿಯಾಗಿದ್ದಾನೆ.

ಘಟನೆ ಬಳಿಕ ಮೆಟ್ರೋ ನಿಲ್ದಾಣಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದ್ದು, ತಪಾಸಣೆಯನ್ನೂ ಸೂಕ್ಷ್ಮವಾಗಿ ಮಾಡಲಾಗುತ್ತಿದೆ.

ಪೊಲೀಸ್‌ ಅಧಿಕಾರಿಗಳು ಹೆಚ್ಚುವರಿ ಸಿಬಂದಿಗಳನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಿದ್ದಾರೆ.

ಜುಬ್ಟಾ,ಪೈಜಾಮ ಧರಿಸಿ ಬಂದಿದ್ದ ವ್ಯಕ್ತಿಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

No Comments

Leave A Comment