Log In
BREAKING NEWS >
ಉಡುಪಿ ಶ್ರೀಕೃಷ್ಣಮಠ:ಸುವರ್ಣಗೋಪುರದ ಸಮರ್ಪಣೆ-ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಜೂನ್ 1ರಿ೦ದ 9ರವರೆಗೆ ಜರಗಲಿದೆ....

ಶಿರಾಡಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು: ಓರ್ವ ಸಾವು, ನಾಲ್ವರು ಗಂಭೀರ

ನೆಲ್ಯಾಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಪೇಟೆಯ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ದೊಡ್ಡ ಗುಂಡಿಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಕಾರಿನಲ್ಲಿದ್ದ ಬೆಂಗಳೂರಿನ ಪ್ರಯಾಣಿಕರು ಧರ್ಮಸ್ಥಳದಿಂದ ಕುಕ್ಕೆಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದ್ದು, ಬೆಂಗಳೂರಿನ ಸುನಿಲ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಸುಮಾರು 20 ಅಡಿ ಆಳದ ಗುಂಡಿಗೆ ಕಾರು ಬಿದ್ದಿದೆ. ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಗಾಯಗೊಂಡವರನ್ನು ಕೂಡಲೇ ಮಂಗಳೂರು ಆಸ್ಪತ್ರಗೆ ಸೇರಿಸಲಾಗಿದೆ.


ಅಪಾಯಕಾರಿ ಗುಂಡಿ
: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವೇಳೆಯಲ್ಲಿ ಈ ಜಾಗದಲ್ಲಿ ಮೋರಿ ಹಾಕಲೆಂದು ಗುಂಡಿ ಅಗೆದಿದ್ದು, ನಂತರ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಆದರೆ ಸುಮಾರು 20 ಅಡಿ ಆಳವಿರುವ ಈ ಗುಂಡಿ ಅಪಾಯಕಾರಿಯಾಗಿದ್ದು, ಕೆಲ ದಿನಗಳ ಹಿಂದೆ ಬೈಕ್ ಸವಾರನೊಬ್ಬ ಇದೇ ಗುಂಡಿಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ. ಇಲಾಖೆಯ ಬೇಜವಾಬ್ದಾರಿಗೆ ಸಾರ್ವಜನಿಕರು ಆಕ್ರೊಶ ವ್ಯಕ್ತಪಡಿಸುತ್ತಿದ್ದಾರೆ.

No Comments

Leave A Comment