Log In
BREAKING NEWS >
ಜುಲಾಯಿ:28ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಜಿ ಎಸ್ ಬಿ ಯುವಕ ಮ೦ಡಳಿಯ ಆಶ್ರಯದಲ್ಲಿ ತುಳಸಿ ಅರ್ಚನೆ ಜರಗಲಿದೆ....ಅಗಸ್ಟ್ 5ರಿ೦ದ 12ರವರೆಗೆ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 119ನೇ ಭಜನಾ ಸಪ್ತಾಹ ಕಾರ್ಯಕ್ರಮ ಜರಗಲಿದೆ.

ಬಾಲಸೋರ್‌: ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಗ್ನಿ ಅವಘಡ

ಭುವನೇಶ್ವರ್‌: ದೆಹಲಿ-ಭುವನೇಶ್ವರ್‌ ನಡುವೆ ಸಂಚರಿಸುವ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಷಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ವರದಿಯಾದಂತೆ ರೈಲಿನ ಕೊನೆಯಲ್ಲಿರುವ ಜನರೇರ್ಟ್‌ ಕೋಚ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ರೈಲನ್ನು ನಿಲ್ಲಿಸಿ ಬೇರೆ ಬೋಗಿಗಳನ್ನು ಬೇರ್ಪಡಿಸಿ ಬೆಂಕಿ ವ್ಯಾಪಿಸುವುದನ್ನು ತಡೆಯಲಾಗಿದೆ.

ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಅವಘಡದಲ್ಲಿ ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

ಕಳೆದ ತಿಂಗಳಿನಲ್ಲಿ ಇದೇ ರೈಲಿನಲ್ಲಿ ವಿಷಾಹಾರ ಸೇವಿಸಿ 20 ಕ್ಕೂ ಹೆಚ್ಚ ಪ್ರಯಾಣಿಕರು ಅಸ್ವಸ್ಥಗೊಂಡಿದ್ದರು.

No Comments

Leave A Comment