Log In
BREAKING NEWS >
ಮಹಾರಾಷ್ಟ್ರದಲ್ಲಿ ಸರಕಾರಿ ನೌಕರರಿಗೆ ಉದ್ಧವ್‌ ಬಂಪರ್‌ ಗಿಫ್ಟ್‌: ವಾರಕ್ಕೆ ಐದು ದಿನ ಮಾತ್ರ ಕೆಲಸ...

ಪಲಿಮಾರು ಶ್ರೀಗಳ ಉತ್ತರಾಧಿಕಾರಿಗೆ “ಶ್ರೀವಿದ್ಯಾರಾಜೇಶ್ವರ” ತೀರ್ಥಶ್ರೀಪಾದ ನಾಮಕರಣ

ಉಡುಪಿ: ಪರ್ಯಾಯ ಶ್ರೀಪಲಿಮಾರು ಶ್ರೀಗಳು ಇದೀಗ ನೂತನವಾಗಿ ತನ್ನ ಮಠದ ಉತ್ತರಾಧಿಕಾರಿಯಾಗಿ ಶೈಲೇಶ್ ಉಪಾಧ್ಯಾಯರವರನ್ನು ನೇಮಕ ಮಾಡಿದ್ದರು.

ಇ೦ದು ಭಾನುವಾರ ಕೃಷ್ಣಮಠದ ಸರ್ವಜ್ಞ ಪೀಠದಲ್ಲಿ, ಶ್ರೀ ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ದಿನಾಂಕ 10.05.2019 ರಂದು ಸನ್ಯಾಸ ಆಶ್ರಮ ಸ್ವೀಕರಿಸಿದ ನೂತನ ಯತಿಗಳಿಗೆ ಮಧ್ಯಾಹ್ನ 12.20 ಗಂಟೆಗೆ ಪರ್ಯಾಯ ಶ್ರೀ ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ವೇದಾಂತ ಸಾಮ್ರಾಜ್ಯಕ್ಕೆ ಪಟ್ಟಾಭಿಷೇಕ ಮಾಡಿ ಪಲಿಮಾರು ಮಠದ 32ನೇ ಯತಿಗಳಾಗಿ ಶ್ರೀ ವಿದ್ಯಾರಾಜೇಶ್ವರತೀರ್ಥ ಎಂದು ನಾಮಕರಣ ಮಾಡಿದರು.

ಈ ಸಂದರ್ಭದಲ್ಲಿ ಪೇಜಾವರ ಹಿರಿಯ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರಿಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರಿಪಾದರು,ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರಿಪಾದರು,ಪೇಜಾವರ ಕಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರಿಪಾದರು, ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರಿಪಾದರು, ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭತೀರ್ಥ ಶ್ರಿಪಾದರು,ಭೀಮನಕಟ್ಟೆ ಮಠಾಧೀಶರಾದ ಶ್ರೀ ರಘುವರೇಂದ್ರತೀರ್ಥ ಶ್ರಿಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರಿಪಾದರು ಉಪಸ್ಥಿತರಿದ್ದರು.ಧಾರ್ಮಿಕ ಕಾರ್ಯಕ್ರಮಗಳನ್ನು ವಿದ್ವಾಂಸರಾದ ಸುಬ್ರಮಣ್ಯ ಭಟ್ ಗುಂಡಿಬೈಲ್ ನಡೆಸಿಕೊಟ್ಟರು,ಹಾಗೂ ಪರ್ಯಾಯ ಮಠದ ದಿವಾನರಾದ ವೇದವ್ಯಾಸ ತಂತ್ರಿ,ಕಂಬ್ಲಕಟ್ಟ ಸುರೇಂದ್ರ ಉಪಾದ್ಯಾಯ,ಕಂಬ್ಲಕಟ್ಟ ಉಪಾದ್ಯಾಯ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment