Log In
BREAKING NEWS >
ಉಡುಪಿ ಶ್ರೀಕೃಷ್ಣಮಠ:ಸುವರ್ಣಗೋಪುರದ ಸಮರ್ಪಣೆ-ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಜೂನ್ 1ರಿ೦ದ 9ರವರೆಗೆ ಜರಗಲಿದೆ....

ಧಾರ್ಮಿಕ ಭಾವನೆಗಳಿಗೆ ಧಕ್ಕೆ:ಕಮಲಹಾಸನ್‌ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

ಹೊಸದಿಲ್ಲಿ: ಹಿಂದು ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ನಟ ಕಮಲ ಹಾಸನ್‌ ವಿರುದ್ಧ ದೆಹಲಿಯ ಪಟಿಯಾಲಾ ಹೌಸ್‌ ಕೋರ್ಟ್‌ನಲ್ಲಿ ಕ್ರಿಮಿನಲ್‌ ಪ್ರಕರಣವನ್ನು ದಾಖಲಿಸಲಾಗಿದೆ.

ಮಕ್ಕಳ್‌ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕರಾಗಿರುವ ಕಮಲ ಹಾಸನ್‌ ಅರಾವಾಕುರಿಚಿ ವಿಭಾಸಭಾ ಕ್ಷೇತ್ರದ ಉಪಚುನಾವಣಾ  ಪ್ರಚಾರದ ವೇಳೆ ‘ಸ್ವತಂತ್ರ ಭಾರತದ ಮೊದಲ ಹಿಂದು ಉಗ್ರ ನಾಥುರಾಮ್‌ ಗೋಡ್ಸೆ’ ಎಂದು ಹೇಳಿಕೆ ನೀಡಿದ್ದರು.

ಕಮಲ ಹಾಸನ್‌ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಹಿಂದುಗಳ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಸಹಿತ ವಿವಿಧ ಸಂಘಟನೆಗಳು ಆಗ್ರಹಿಸಿದ್ದವು.

ಮಂಗಳವಾರ ಕಮಲಹಾಸನ್‌ ಅವರ ಚೆನ್ನೈ ನಿವಾಸದ ಭದ್ರತೆಯನ್ನು ಇನ್ನಷ್ಟು ಬಿಗಿ ಗೊಳಿಸಲಾಗಿದೆ.

No Comments

Leave A Comment