Log In
BREAKING NEWS >
ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ....ಅನಾಮಧೇಯ ವ್ಯಕ್ತಿ ಬ್ಯಾಗ್ ಇಟ್ಟಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಗೃಹ ಸಚಿವ ಬೊಮ್ಮಾಯಿ....

ಐಟಿ ಅಧಿಕಾರಿಗಳನ್ನು ವಾಪಸ್ ಕಳುಹಿಸಿದ ಸಿಎಂ ಭದ್ರತಾ ಸಿಬ್ಬಂದಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಂಗಿದ್ದ ಹೊಟೇಲ್ ಮೇಲೆ ದಾಳಿ ನಡೆಸಲು ತೆರಳಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಸಿಎಂ ಭದ್ರತಾ ಸಿಬ್ಬಂದಿ ವಾಪಸ್ ಕಳುಹಿಸಿದ್ದಾರೆ.

ಕಳೆದ ಸೋಮವಾರ ರಾತ್ರಿ ಐಟಿ ಇಲಾಖೆಯ ಅಧಿಕಾರಿಗಳ ತಂಡ  ಸಿಎಂ ತಂಗಿದ್ದ ಹುಬ್ಬಳ್ಳಿಯ ಡೆನ್ನಿಸನ್ ಅಂಡ್ ಕಾಟನ್ ಕೌಂಟಿ ಹೊಟೇಲ್ ನ 6ನೇ ಮಹಡಿಗೆ ಹೋಗಿದ್ದಾರೆ. ಆದರೆ ಐಟಿ ಅಧಿಕಾರಿಗಳನ್ನು ತಡೆದ ಸಿಎಂ ಭದ್ರತಾ ಸಿಬ್ಬಂದಿ, ಸರ್ಚ್ ವಾರಂಟ್ ತೋರಿಸುವಂತೆ ಕೇಳಿದ್ದಾರೆ. ಈ ವೇಳೆ ಐಟಿ ಅಧಿಕಾರಿಗಳು, ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರ ವಿರುದ್ಧ ಬಿಜೆಪಿ ವಾಟ್ಸ್ ಆಪ್ ಮೂಲಕ ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನ ಪ್ರತಿಯನ್ನು ಮತ್ತು ಐಟಿ ಇಲಾಖೆ ಆದೇಶವನ್ನು ತೋರಿಸಿದ್ದಾರೆ.

ಭದ್ರತಾ ಸಿಬ್ಬಂದಿ, ಇದು ಶಿವಕುಮಾರ್ ಅವರ ವಿರುದ್ಧ ನೀಡಿದ ದೂರು. ಸಿಎಂ ವಿರುದ್ಧ ಅಲ್ಲ ಎಂದು ಹೇಳಿ ಐಟಿ ಅಧಿಕಾರಿಗಳಿಗೆ ಪ್ರವೇಶ ನಿರಾಕರಿಸಿದ್ದಾರೆ. ಹೀಗಾಗಿ ಐಟಿ ಅಧಿಕಾರಿಗಳು ಅಲ್ಲಿಂದ ವಾಪಸ್ ಬಂದಿದ್ದಾರೆ.

ಈ ಕುರಿತು ಸಿಎಂ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ಅವರು ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

No Comments

Leave A Comment