Log In
BREAKING NEWS >
ದೇಶದಲ್ಲಿ ಮುಂದುವರೆದ ಕೊರೋನಾ ಆರ್ಭಟ: ತ.ನಾಡಲ್ಲಿ ಮತ್ತಿಬ್ಬರು ಬಲಿ, ಸಾವಿನ ಸಂಖ್ಯೆ 83ಕ್ಕೆ ಏರಿಕೆ.....ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ....

ಬಸ್, ಟ್ರ್ಯಾಕ್ಟರ್ ಅಪಘಾತ; ಐವರು ಪ್ರಯಾಣಿಕರು ಸಾವು, 30 ಮಂದಿಗೆ ಗಾಯ

ಉನ್ನಾವೋ(ಉತ್ತರಪ್ರದೇಶ): ವೇಗವಾಗಿ ಬಂದ ಬಸ್ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸಾವನ್ನಪ್ಪಿದ್ದು, 30 ಜನರು ಗಾಯಗೊಂಡಿರುವ ಘಟನೆ ಶನಿವಾರ ಲಕ್ನೋ-ಆಗ್ರಾ ಎಕ್ಸ್ ಪ್ರೆಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ದೆಹಲಿಯಿಂದ ಬಿಹಾರಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ ಏಕಾಏಕಿ ಟ್ರ್ಯಾಕ್ಟರ್ ಬಂಡಿಗೆ ಡಿಕ್ಕಿ ಹೊಡೆದಿತ್ತು. ಈ ಘಟನೆ ದೇವ್ ಖಾರಿ ಗ್ರಾಮದ ಸಮೀಪ ಸಂಭವಿಸಿದ್ದು, ಇದು ಬಾಂಗಾರ್ ಮಾವೌ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದೆ.

ಗಾಯಗೊಂಡಿದ್ದ ಜನರನ್ನು ಲಕ್ನೋ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment