Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 26ರ೦ದು ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಆಂಧ್ರಪ್ರದೇಶ ವಿಧಾನಸಭೆ; ಚಂದ್ರಬಾಬು ನಾಯ್ಡು TDP ಧೂಳೀಪಟ, ಜಗನ್ ಗೆ ಗದ್ದುಗೆ!

ಆಂಧ್ರಪ್ರದೇಶ:2014ರಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣ ಪ್ರತ್ಯೇಕ ರಾಜ್ಯವಾದ ಬಳಿಕ ನಡೆದ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ ಧೂಳೀಪಟವಾಗಿದ್ದು, ಜಗನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಸಿಪಿ ಅಧಿಕಾರದ ಗದ್ದುಗೆ ಏರಿದೆ.

2019ರ ಏಪ್ರಿಲ್ 11ರಂದು 175 ವಿಧಾನಸಭಾ ಹಾಗೂ 25 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. 175 ಸದಸ್ಯ ಬಲದ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು 88 ಸ್ಥಾನಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ವೈಎಸ್ ಆರ್ ಸಿ ಬರೋಬ್ಬರಿ 148 ಸ್ಥಾನ ಪಡೆಯುವ ಮೂಲಕ ಅಧಿಕಾರ ಗದ್ದುಗೆ ಏರಿದೆ.

ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಕೇವಲ 25 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಧೂಳೀಪಟವಾಗಿದೆ. ಇದರೊಂದಿಗೆ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿ ಗದ್ದುಗೆಯಿಂದ ಕೆಳಗಿಳಿದಿದ್ದು, ಪ್ರಧಾನಿ ಕನಸು ಕೂಡಾ ನುಚ್ಚು ನೂರಾಗಿದೆ! ಆಂಧ್ರಪ್ರದೇಶದಲ್ಲಿ ಜಗನ್ ಸಿಎಂ ಪಟ್ಟ ಅಲಂಕರಿಸಲಿದ್ದು, ಚಂದ್ರಬಾಬು ನಾಯ್ಡು ಶುಕ್ರವಾರ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ವರದಿ ತಿಳಿಸಿದೆ.

No Comments

Leave A Comment