Log In
BREAKING NEWS >
ಮಹಾರಾಷ್ಟ್ರದಲ್ಲಿ ಸರಕಾರಿ ನೌಕರರಿಗೆ ಉದ್ಧವ್‌ ಬಂಪರ್‌ ಗಿಫ್ಟ್‌: ವಾರಕ್ಕೆ ಐದು ದಿನ ಮಾತ್ರ ಕೆಲಸ...

ಬಿಜೆಪಿ ವಿರುದ್ಧ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಹೀನಾಯ ಸೋಲು

ತುಮಕೂರು: ಸ್ಥಳೀಯ ಕಾಂಗ್ರೆಸ್ ಮುಖಂಡರ ವಿರೋಧದ ನಡುವೆಯೂ ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್ ಡಿ ದೇವೇಗೌಡ ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜು ವಿರುದ್ಧ ಪರಾಭವಗೊಂಡಿದ್ದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಬಸವರಾಜ್ ವಿರುದ್ಧ ದೇವೇಗೌಡರು 27 ಸಾವಿರ ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ. ಮತ ಎಣಿಕೆ ಪ್ರಾರಂಭದಲ್ಲಿ ದೇವೇಗೌಡರು ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ 7 ನೇ ಸುತ್ತಿನ ಮತ ಎಣಿಕೆ ವೇಳೆಗೆ ತೀವ್ರ ಹಿನ್ನಡೆ ಎದುರಿಸಿರುವ ಮಾಜಿ ಪ್ರಧಾನಿ ದೇವೇಗೌಡ, ತೀವ್ರ ಮುಖಭಂಗ ಎದುರಿಸಿದ್ದಾರೆ. 

 

 

ಮೈತ್ರಿ ಅಭ್ಯರ್ಥಿಯಾಗಿ ತುಮಕೂರಿನಿಂದ ಸ್ಪರ್ಧಿಸಿದ್ದ ಹೆಚ್ ಡಿ ದೇವೇಗೌಡ,  ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರ ವಿರೋಧಕ್ಕೂ ಗುರಿಯಾಗಿದ್ದರು. 2014 ರಲ್ಲಿ ಸಂಸದರಾಗಿ ಆಯ್ಕೆಗೊಂಡಿದ್ದ ಕಾಂಗ್ರೆಸ್ ನ ಮುದ್ದ ಹನುಮೇಗೌಡ, ಮಧುಗಿರಿ ಕ್ಷೇತ್ರದ ಶಾಸಕ ಕೆಎನ್ ರಾಜಣ್ಣ   ದೇವೇಗೌಡ ತುಮಕೂರಿನಿಂದ ಸ್ಪರ್ಧಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

No Comments

Leave A Comment