Log In
BREAKING NEWS >
ಸಮಸ್ತ ಜನತೆಗೆ,ನಮೆಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ``````` ಶ್ರೀಕೃಷ್ಣ ಜನ್ಮಾಷ್ಟಮಿಯ(ಚ೦ದ್ರಾ) ಶುಭಾಶಯಗಳು``````ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಸುಪ್ರೀಂಕೋರ್ಟ್‌ನ ನಾಲ್ವರು ಹೊಸ ನ್ಯಾಯಮೂರ್ತಿಗಳ ಪ್ರಮಾಣ ವಚನ

ನವದೆಹಲಿ: ಸುಪ್ರೀಂಕೋರ್ಟ್‌ನ ನಾಲ್ವರು ಹೊಸ ನ್ಯಾಯಮೂರ್ತಿಗಳು ಇಂದು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು.

ನೂತನ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಸೂರ್ಯಕಾಂತ್, ಅನಿರುದ್ಧ ಬೋಸ್, ಎ ಎಸ್‍ ಬೋಪಣ್ಣ ಅವರಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಪ್ರಮಾಣ ವಚನ ಬೋಧಿಸಿದರು. ಸುಪ್ರೀಂಕೋರ್ಟ್‌ನ ಇತರ ಹಿರಿಯ ನ್ಯಾಯಮೂರ್ತಿಗಳು ಉಪಸ್ಥಿತರಿದ್ದರು.

ಇವರ ಸೇರ್ಪಡೆಯೊಂದಿಗೆ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. 2018 ಅಕ್ಟೋಬರ್ ನಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿ ರಂಜಯ್ ಗೊಗೊಯ್‍ ಅವರು ಅಧಿಕಾರ ವಹಿಸಿಕೊಂಡ ಬಳಿಕ 10 ನ್ಯಾಯಮೂರ್ತಿಗಳ ಹುದ್ದೆಯನ್ನು ಭರ್ತಿ ಮಾಡಿದ್ದಾರೆ.

No Comments

Leave A Comment