Log In
BREAKING NEWS >
ಅಯೋಧ್ಯೆ ಪ್ರಕರಣ: ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ಮುಸ್ಲಿಂ ಅರ್ಜಿದಾರರ ವಿರೋಧ!....

ಕಿವೀಸ್ ವಿರುದ್ಧ ಸೋತ ಟೀಂ ಇಂಡಿಯಾ ಲೀಗ್‌ನಿಂದಲೇ ಹೊರಕ್ಕೆ; ನಟ ಕಮಲ್ ಖಾನ್ ವ್ಯಂಗ್ಯ!

ಬೆಂಗಳೂರು: ವಿಶ್ವಕಪ್ ಮಹಾಸಮರ ಶುರುವಾಗಲಿದ್ದು ಇದೀಗ ನ್ಯೂಜಿಲ್ಯಾಂಡ್ ನಡುವೆ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದ್ದು ಇದನ್ನು ವ್ಯಂಗ್ಯ ಮಾಡಿರುವ ಬಾಲಿವುಡ್ ನಟ ಕಮಲ್ ಖಾನ್ ಟೀಂ ಇಂಡಿಯಾ ವಿಶ್ವಕಪ್ ನ ಲೀಗ್‌ನಿಂದಲೇ ಹೊರ ಬೀಳಲಿದೆ ಎಂದು ಹೇಳಿದ್ದಾರೆ.

ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 179 ರನ್ ಗಳಿಗೆ ಸರ್ವಪತನ ಕಂಡಿತ್ತು. ಅಲ್ಲದೆ ನ್ಯೂಜಿಲ್ಯಾಂಡ್ 6 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಇದು ಬರೀ ಟ್ರೈಲರ್, ಪಿಕ್ಚರ್ ಇನ್ನೂ ಬಾಕಿ ಇದೆ ಎಂದು ಕಮಲ್ ಖಾನ್ ಭಾರತದ ಪ್ರದರ್ಶನವನ್ನು ವ್ಯಂಗ್ಯವಾಡಿದ್ದಾರೆ.

 

ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಜೂನ್ 5ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನು ಆಡಲಿದೆ.

No Comments

Leave A Comment