Log In
BREAKING NEWS >
ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ....

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

ವಿಜಯವಾಡ: ಆಂಧ್ರಪ್ರದೇಶದ ವಿಭಜನೆಯ ಬಳಿಕ ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ವೈಎಸ್ ಆರ್ ಕಾಂಗ್ರೆಸ್ ನ ಜಗನ್ ಮೋಹನ್ ರೆಡ್ಡಿ ಮೇ.30 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ವಿಜಯವಾಡದ ಐಜಿಎಂಸಿ ಸ್ಟೇಡಿಯಂ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆದಿದ್ದು, ಸಂಪುಟ ಸಚಿವರು  ಜೂ.07 ಕ್ಕೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಪದಗ್ರಹಣ ಕಾರ್ಯಕ್ರಮದಲ್ಲಿ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್, ಡಿಎಂಕೆ ನಾಯಕ ಎಂ ಕೆ ಸ್ಟ್ಯಾಲಿನ್, ಪಾಂಡಿಚರಿ ಆರೋಗ್ಯ ಸಚಿವ ಮಲ್ಲಡಿ ಕೃಷ್ಣ ರಾವ್ ವಿಶೇಷ ಅತಿಥಿಗಳಾಗಿ ಭಾಗಿಯಾಗಿದ್ದರು.

No Comments

Leave A Comment