Log In
BREAKING NEWS >
ತಪ್ಪಿದ ಅನಾಹುತ: ಜಮ್ಮು ಕಾಶ್ಮೀರದಲ್ಲಿ 40 ಕೆಜಿ ಸ್ಫೋಟಕ ವಶ ಪಡೆದ ಸೇನೆ....

ಐರಾವತ ಯೋಜನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಐರಾವತ ಯೋಜನೆಯ ಫಲಾನುಭವಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಾಹನಗಳನ್ನು ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು.ಬೆಂಗಳೂರಿನ ಪರಿಶಿಷ್ಟ ಜಾತಿ ಹಾಗೂ ಪಂಗಡದ 200 ಫಲಾನುಭವಿಗಳಿಗೆ ಐರಾವತ ಯೋಜನೆಯಡಿ ವಾಹನಗಳ ಕೀಯನ್ನು ಹಸ್ತಾಂತರ ಮಾಡಲಾಯಿತು.

ಬಳಿಕ ಮುಖ್ಯಮಂತ್ರಿ ಎಚ್‍ ಡಿ ಕುಮಾರಸ್ವಾಮಿ ಮಾತನಾಡಿ, ಫಲಾನುಭವಿಗಳಿಗೆ ವಾಹನ ವಿತರಣೆ ಸೇರಿದಂತೆ ಎಲ್ಲಾ ರೀತಿಯ ಸರ್ಕಾರದಿಂದ ಸೌಲಭ್ಯ ಸಿಗಲಿದೆ. ರಾಜ್ಯದಲ್ಲಿ 4500 ಕುಟುಂಬಗಳಿಗೆ ಈ ಯೋಜನೆಯಿಂದ ಅನುಕೂಲ ಆಗಲಿದೆ. ಈ ಯೋಜನೆಯ ಫಲಾನುಭವಿಗಳು ತಮ್ಮ ಜೀವನವನ್ನು ಸವಾಲಾಗಿ ಸ್ವೀಕರಿಸಿ, ಕುಟುಂಬಗಳು ನೆಮ್ಮದಿಯಾಗಿ ಜೀವಿಸುವಂತೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಜೀವನದಲ್ಲಿ ಶಿಸ್ತು, ಬದ್ಧತೆಯನ್ನು ಅಳವಡಿಸಿಕೊಳ್ಳಬೇಕು, ಕೆಲಸದಲ್ಲಿ ಪ್ರಾಮಾಣಿಕ ತೋರಬೇಕು. ಹಾಗಾದರೆ ಜೀವನ ಯಶಸ್ವಿಯಾಗಲಿದೆ ಎಂದು ಹೇಳಿ ಎಲ್ಲಾ ಫಲಾನುಭವಿಗಳಿಗೆ ಕುಮಾರಸ್ವಾಮಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹಾಗೂ ಶಾಸಕರು ಉಪಸ್ಥಿತರಿದ್ದರು.

No Comments

Leave A Comment