Log In
BREAKING NEWS >
ಅಯೋಧ್ಯೆ ಪ್ರಕರಣ: ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ಮುಸ್ಲಿಂ ಅರ್ಜಿದಾರರ ವಿರೋಧ!....

ಲೋಕಸಭಾ ಡೆಪ್ಯೂಟಿ ಸ್ಪೀಕರ್ ಸ್ಥಾನ ಬಿಜೆಡಿಗೆ ನೀಡುವ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ಉಪ ಸಭಾಧ್ಯಕ್ಷ(ಡೆಪ್ಯೂಟಿ ಸ್ಪೀಕರ್) ಸ್ಥಾನವನ್ನು ಎನ್ ಡಿಎ ಮಿತ್ರ ಪಕ್ಷ ಬಿಜೆಡಿಗೆ ಬಿಟ್ಟುಕೊಡುವ ಸಾಧ್ಯತೆ ಇದೆ.

ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಡಿ ಮುಖ್ಯಸ್ಥ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರೊಂದಿಗೆ ಮಾತನಾಡಿದ್ದು, ಪ್ರಧಾನಿ ಮೋದಿ ಅವರು ಲೋಕಸಭಾ ಡೆಪ್ಯೂಟಿ ಸ್ಪೀಕರ್ ಸ್ಥಾನವನ್ನು ಬಿಜೆಡಿಗೆ ನೀಡಲು ಬಯಸಿದ್ದಾರೆ ಎಂದು ತಿಳಿಸಿದ್ದಾರೆ.

ಬಿಜೆಡಿಯಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಭರ್ತೃಹರಿ ಮಹ್ತಬ್ ಅವರು ಡೆಪ್ಯೂಟಿ ಸ್ಪೀಕರ್ ಆಗಿ ಆಯ್ಕೆಯಾಗುವ ಸಾಧ್ಯತೆ ಇದೆ.

No Comments

Leave A Comment