Log In
BREAKING NEWS >
ಕೊರ೦ಗ್ರಪಾಡಿಯಲ್ಲಿ ರಿಕ್ಷಾ ಬಸ್ ಡಿಕ್ಕಿ-ಶಾಲಾ ಮಗು ಮತ್ತು ಚಾಲಕ ಗ೦ಭೀರ....ಜುಲಾಯಿ 4ಕ್ಕೆ ಅದಮಾರು ಮಠದ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ....

ಐಎಂಎ ಜುವೆಲರ್ಸ್‌ ವಂಚನೆ ಪ್ರಕರಣ ಸಿಸಿಬಿ ತನಿಖೆಗೆ: ಸಿಎಂ

ಬೆಂಗಳೂರು: ಅಧಿಕ ಬಡ್ಡಿ ಆಸೆ ತೋರಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂ. ಹೂಡಿಕೆ ಮಾಡಿಸಿಕೊಂಡು ಐಎಂಎ ಜುವೆಲರ್ಸ್‌ ಮಾಲಕ ಮನ್ಸೂರ್‌ ಖಾನ್‌ ನಾಪತ್ತೆಯಾಗಿರುವಪ್ರಕರಣವನ್ನು ಸರ್ಕಾರ ಸಿಸಿಬಿ ತನಿಖೆಗೆ ನೀಡಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿ ಸಿಸಿಬಿ ತನಿಖೆ ನೀಡಿರುವ ಬಗ್ಗೆ ತಿಳಿಸಿದ್ದಾರೆ.

ಐಎಂಎ ಜುವೆಲರ್ಸ್‌ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹೂಡಿಕೆದಾರರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಂಡಿದ್ದು ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಗೃಹ ಸಚಿವರಾದ ಎಂ.ಬಿ.ಪಾಟೀಲ್‌ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದು ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಎಂದು ಟ್ವೀಟ್‌ ಮಾಡಿದ್ದಾರೆ.

ಈಗಾಗಲೆನಿಗೂಢವಾಗಿ ನಾಪತ್ತೆಯಾಗಿರುವ ಮನ್ಸೂರ್‌ ಖಾನ್‌ ಪತ್ತೆಗಾಗಿ ಪೊಲೀಸರ ನಾಲ್ಕು ತಂಡಗಳನ್ನು ರಚಿಸಲಾಗಿದೆ.

No Comments

Leave A Comment