ನಿರ್ಮಾಣ ಹಂತದ ಟ್ಯಾಂಕ್ ಕುಸಿದು ಮೂವರ ಸಾವು; ಹಲವು ಕಾರ್ಮಿಕರ ರಕ್ಷಣೆ ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಕೊಳಚೆ ನೀರು ಶುದ್ಧೀಕರಣ ಘಟಕದ ಮೇಲ್ಛಾವಣಿ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಸೋಮವಾರ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ ನಲ್ಲಿ ನಡೆದಿದೆ. ಸೆಂಟ್ರಿಂಗ್ ಕೆಲಸ ನಡೆಯುತ್ತಿದ್ದ ವೇಳೆ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದರು. ಕೂಡಲೇ ಸ್ಥಳಕ್ಕೆ ಎನ್ ಡಿಆರ್ ಎಫ್, ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಮೂವರು ಕಾರ್ಮಿಕರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಉಳಿದ ಕಾರ್ಮಿಕರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ. ಮೃತ ಕಾರ್ಮಿಕರು ಪಶ್ಚಿಮಬಂಗಾಳದ ಮೂಲದವರಾಗಿದ್ದು, ಸ್ಥಳಕ್ಕೆ ಸಚಿವ ಕೃಷ್ಣಬೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ 17 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದೆ. Share this:TweetWhatsAppEmailPrintTelegram