ನಿರ್ಮಲಾ ಸೀತಾರಾಮನ್ ಭೇಟಿ; ವಿದ್ಯುತ್ ಉತ್ಪಾದನೆ, ಮಹದಾಯಿ ಯೋಜನೆ ಅನುಮತಿಗೆ ಡಿಕೆಶಿ ಮನವಿ
ನವದೆಹಲಿ: ಮೇಕೆದಾಟು ಸಮತೋಲನ ಅಣೆಕಟ್ಟು ಯೋಜನೆ, ಮಹದಾಯಿ ಕುಡಿಯುವ ನೀರು, ಕೃಷ್ಣ ಜಲವಿವಾದ-ll ಹಾಗೂ ವಿದ್ಯುತ್ ಉತ್ಪಾದನೆ ಯೋಜನೆಗಳಿಗೆ ಕೇಂದ್ರದಿಂದ ಅನುಮತಿ ಪಡೆಯಲು ಸಹಕಾರ ನೀಡುವಂತೆ ಸಚಿವ ಡಿಕೆ ಶಿವಕುಮಾರ್ ಮಂಗಳವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡರು.
ಸೋಮವಾರದಿಂದ ಆರಂಭಗೊಂಡಿದ್ದ 17ನೇ ಲೋಕಸಭೆಯ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಕರ್ನಾಟಕದ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಇಂದು ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಸಿದರು.
ಸೋಮವಾರ ಮಹದಾಯಿ ಹಾಗೂ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಲು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಶೀಘ್ರವೇ ಅನುಮತಿ ಕೊಡಿಸುವಂತೆ ಡಿಕೆಶಿ ಅವರು ಮನವಿ ಮಾಡಿದ್ದರು.
ಕೇಂದ್ರ ಸರ್ಕಾರದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಸಚಿವರಾದ ಪ್ರಹ್ಲಾದ್ ಜೋಶಿ, ಡಿವಿ ಸದಾನಂದ ಗೌಡ, ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಎರಡೂ ಯೋಜನೆಗಳಿಗೆ ಕೇಂದ್ರದಿಂದ ಅನುಮತಿ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದರು.