ಜ್ಯೋತಿಷಿ ಮಾತು ನಂಬಿ ಹೆಣ್ಣು ಮಗುವಿನ ಕತ್ತು ಹಿಸುಕಿ ಕೊಂದ ಪಾಪಿ ತಂದೆ
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯ ಮಾತು ನಂಬಿ ಒಂದೂವರೆ ತಿಂಗಳ ಹಸುಗೂಸನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರಿನ ಬೂಚೇನಹಳ್ಳಿ ಕಾವಲ್ ನಲ್ಲಿ ನಡೆದಿದೆ.
ಹೆಣ್ಣು ಮಗು ಎಂಬ ಕಾರಣಕ್ಕೆ ಒಂದೂವರೆ ತಿಂಗಳ ಕಂದಮ್ಮನನ್ನು ಮಗುವಿನ ತಂದೆ ಮಂಜುನಾಥ್ ( 27) ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲಿ ಮಗುವಿನ ತಾಯಿ ಇಲ್ಲದ ವೇಳೆ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ್ದ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ ಆರೋಪಿ ಮಂಜುನಾಥನನ್ನು ಬಂಧಿಸಿದ್ದಾರೆ.