
ರಾಜ್ಯ ಕಾಂಗ್ರೆಸ್ ಗೆ ಆಘಾತ: ಕೆಪಿಸಿಸಿ ವಿಸರ್ಜಿಸಿ ಆದೇಶ ಹೊರಡಿಸಿದ ಎಐಸಿಸಿ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್ ಕಳಪೆ ಪ್ರದರ್ಶನ ಮಾಡಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೈಕಮಾಂಡ್ ಮೇಜರ್ ಸರ್ಜರಿ ಮಾಡಲು ಮುಂದಾಗಿದೆ.
ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರನ್ನು ಹೊರತು ಪಡಿಸಿ ಉಳಿದ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿ ಕೆಪಿಸಿಸಿ ಘಟಕ ಪುನಾರಚನೆಗೆ ಎಐಸಿಸಿ ಮಹತ್ವದ ಆದೇಶ ಹೊರಡಿಸಿದೆ.
