Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಪತ್ನಿ, 3 ಪುಟ್ಟ ಮಕ್ಕಳನ್ನು ಕತ್ತು ಸೀಳಿ ಹತ್ಯೆಗೈದ ಕ್ರೂರಿ ತಂದೆ!

ಹೊಸದಿಲ್ಲಿ : ದೇಶವೇ ಬೆಚ್ಚಿ ಬೀಳುವ ಕ್ರೂರ ಕೃತ್ಯವೊಂದರಲ್ಲಿ ವ್ಯಕ್ತಿಯೊಬ್ಬ ಪತ್ನಿ, 2 ತಿಂಗಳ ಮಗು ಸೇರಿ ಮೂವರು ಮಕ್ಕಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿದ್ದಾನೆ.

ಮಹ್ರೌಲಿ ಎಂಬಲ್ಲಿ ಭೀಭತ್ಸ ಘಟನೆ ನಡೆದಿದ್ದು, ಉಪೇಂದ್ರ ಶುಕ್ಲಾ ಎಂಬಾತ ಕೃತ್ಯ ಎಸಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಬಾಣಂತಿಯಾಗಿದ್ದ ಪತ್ನಿ, 2 ತಿಂಗಳ ಮಗು, 5 ಮತ್ತು 3 ವರ್ಷದ ಇನ್ನಿಬ್ಬರು ಮಕ್ಕಳನ್ನು ಹರಿತವಾದ ಚೂರಿಯಿಂದ ಇರಿದು ಹತ್ಯೆಗೈದಿದ್ದಾನೆ. ಕೃತ್ಯಕ್ಕೆ ಬಳಸಲಾದ ಚೂರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಧಿತ ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.

No Comments

Leave A Comment