Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಡಬ್ಬಲ್ ಡೆಕ್ಕರ್ ಬಸ್, ಟ್ರಕ್ ಡಿಕ್ಕಿ; ಮಗು ಸೇರಿದಂತೆ ಐವರ ಪ್ರಯಾಣಿಕರ ಸಾವು

ಆಗ್ರಾ:ಡಬ್ಬಲ್ ಡೆಕ್ಕರ್ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐದು ಪ್ರಯಾಣಿಕರು ಸಾವನ್ನಪ್ಪಿದ್ದು, 50 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ಆಗ್ರಾ-ಲಕ್ನೋ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರದಿಂದ ಜೈಪುರಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಹರ್ಯಾಣದ ಫತೆಹಾಬಾದ್ ನ ತಿರುವಿನಲ್ಲಿ ಮರಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಮಗು ಸೇರಿದಂತೆ ಐವರು ಮೃತಪಟ್ಟಿರುವುದಾಗಿ ವರದಿ ವಿವರಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಉತ್ತರಪ್ರದೇಶ ಜಿಲ್ಲಾಡಳಿತದ ಅಧಿಕಾರಿಗಳು ಭೇಟಿ ನೀಡಿ, ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment