Log In
BREAKING NEWS >
ಉಡುಪಿ ಶ್ರೀಕೃಷ್ಣಾಪುರ ಮಠಾಧೀಶರ 4ನೇ ಪರ್ಯಾಯಕ್ಕೆ ಅದ್ದೂರಿಯ ಬಾಳೆ ಮುಹೂರ್ತ.........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಕಾಶ್ಮೀರ: ಬದ್ಗಾಮ್ ನಲ್ಲಿ ಭಯೋತ್ಪಾದಕರಿಗೆ ಗುರಿಯಿಟ್ಟ ಭದ್ರತಾ ಪಡೆ, ಮುಂದುವರಿದ ಗುಂಡಿನ ಚಕಮಕಿ

ಬದ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್  ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಭಾನುವಾರ ಗುಂಡಿನ ಚಕಮಕಿ ನಡೆಯುತ್ತಿದೆಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯ ಕಾಶ್ಮೀರದ ಬದ್ಗಾಮ್ ಜಿಲ್ಲೆ ಬಗಾಮ್ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಭದ್ರತಾ ಪಡೆಗಳು  ನಡೆಸಿದ್ದ ಶೋಧ ಕಾರ್ಯಾಚರಣೆ ವೇಳೆ ಅಲ್ಲಿ ಉಗ್ರರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿ ಲಭಿಸಿದೆ.

ಆಗ ಭದ್ರತಾ ಪಡೆಗಳು ಉಗ್ರರ ಮೇಲೆ ಗುಂಡು ಹಾರಿಸಿದ್ದು ಉಗ್ರರು-ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದೆ.ಎನ್ ಕೌಂಟರ್ ಮೂಲಕ ಯೋಧರು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

No Comments

Leave A Comment