Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಉಡುಪಿ ಜಿಲ್ಲೆಯಲ್ಲಿ ಬಿಜೆಪಿಗೆ 2 ಲಕ್ಷ ಸದಸ್ಯರ ನೋಂದಣಿ ಗುರಿ: ಕೋಟ

ಕಾಪು: ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಉಡುಪಿ ಜಿಲ್ಲೆಯಲ್ಲಿ 2 ಲಕ್ಷ ಕಾರ್ಯಕರ್ತರ ನೋಂದಣಿಯ ಗುರಿ ಹೊಂದಲಾಗಿದೆ. ಇದಕ್ಕೆ ಪೂರಕವಾಗಿ ಕಾಪು ಮಂಡಲದ ಪ್ರತೀ ಮತಗಟ್ಟೆಗಳಿಂದ 250 ಮಂದಿಯಂತೆ 50 ಸಾವಿರ ಮಂದಿ ಕಾರ್ಯಕರ್ತರನ್ನು ನೋಂದಾವಣೆ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಜು. 2ರಂದು ಕಾಪು ಶ್ರೀ ವೀರಭದ್ರ ಸಭಾಭವನದಲ್ಲಿ ಜರಗಿದ ಕಾಪು ಕ್ಷೇತ್ರ ಬಿಜೆಪಿ ಕ್ಷೇತ್ರ ಕಾರ್ಯಕಾರಿಣಿ ಮತ್ತು ಸಂಘಟನಾ ಪರ್ವ – ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಚುನಾವಣೆ ಇರಲಿ, ಇಲ್ಲದಿರಲಿ ಬಿಜೆಪಿ ಪ್ರತೀ ಸಂದರ್ಭದಲ್ಲೂ ಕಾರ್ಯಕರ್ತರ ಬಲದೊಂದಿಗೆ ಬೆಳೆಯುವ ಪಕ್ಷವಾಗಿದೆ. ಪ್ರತೀ ಮಢಲ ವ್ಯಾಪ್ತಿಯಲ್ಲಿ ಮೂರು ತಿಂಗಳಿಗೊಮ್ಮೆ ನಡೆಯುವ ಕಾರ್ಯಕಾರಿಣಿಯ ಮೂಲಕವಾಗಿ ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು ಜನಪ್ರತಿನಿಧಿಗಳ ನಡುವೆ ಹೊಂದಾಣಿಕೆ ಸಾಧಿಸಿಕೊಳ್ಳಲು ಸಾಧ್ಯವಾಗುತ್ತದೆ. ಮಾತ್ರವಲ್ಲದೇ ಕಾರ್ಯಕರ್ತರ ಅಹವಾಲು ಸ್ವೀಕಾರದ ಜೊತೆಗೆ, ಪಕ್ಷ ಸಮಘಟನೆಗೆ ರೂಪುರೇಷೆ ಸಿದ್ಧಪಡಿಕೊಳ್ಳವಲ್ಲಿಯೂ ಇದು ಸಹಕಾರಿಯಾಗುತ್ತದೆ ಎಂದರು.

ಕಾರ್ಯಕಾರಣಿಯನ್ನು ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಬಿಜೆಪಿ ಕಾರ್ಯಕರ್ತರ ಆಧಾರಿತವಾದ ಪಕ್ಷವಾಗಿದ್ದು ಪಕ್ಷದ ಸುಭದ್ರ ಬೆಳವಣಿಗೆಗೆ ಕಾರ್ಯಕರ್ತರೇ ಆಧಾರಿತವಾಗಿದ್ದಾರೆ. ಪಕ್ಷ ಸಂಘಟನೆಯ ಜೊತೆಗೆ ಮೋದಿ ಅಲೆ ಜೊತೆಗೂಡಿದ ಕಾರಣ ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವಂತಾಗಿದ್ದು, ದೇಶದಲ್ಲಿ ಬಿಜೆಪಿಯ ಬಲವನ್ನು ಇನ್ನಷ್ಟು ವೃದ್ಧಿಸುವ ಸಲುವಾಗಿ ಸದಸ್ಯತ್ವ ಅಭಿಯಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದರು.

ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು ಕ್ಷೇತ್ರ ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ್‌ ಶೆಟ್ಟಿ ಗುರ್ಮೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್‌ ನಾಯಕ್‌, ಸದಸ್ಯತ್ವ ಅಭಿಯಾನದ ಜಿಲ್ಲಾ ಸಂಚಾಲಕ ಕುತ್ಯಾರು ನವೀನ್‌ ಶೆಟ್ಟಿ, ಸಹಸಂಚಾಲಕಿ ಸಂಧ್ಯಾ ರಮೇಶ್‌, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀತಾಂಜಲಿ ಎಂ. ಸುವರ್ಣ, ಕಾಪು ಕ್ಷೇತ್ರ ಸದಸ್ಯತ್ವ ಅಭಿಯಾನದ ಸಹ ಸಂಚಾಲಕ ಸಂದೀಪ್‌ ಶೆಟ್ಟಿ ಕಾಪು ಉಪಸ್ಥಿತರಿದ್ದರು.

ಕಾಪು ಕ್ಷೇತ್ರ ಬಿಜೆಪಿ ಸದಸ್ಯತ್ವ ನೋಂದಣಿ ಸಂಚಾಲಕ ಶ್ರೀಕಾಂತ್‌ ನಾಯಕ್‌ ಅಲೆವೂರು ಸ್ವಾಗತಿಸಿದರು. ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ ವಂದಿಸಿದರು. ಕಾಪು ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಪೈ ಕಾರ್ಯಕ್ರಮ ನಿರೂಪಿಸಿದರು.

No Comments

Leave A Comment