Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ಪುತ್ತೂರು: ವಿದ್ಯಾರ್ಥಿನಿಗೆ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರ ಬಂಧನ

ಪುತ್ತೂರು: ವಿದ್ಯಾರ್ಥಿನಿಯೊಬ್ಬಳಿಗೆ ಅಮಲು ಪದಾರ್ಥ ನೀಡಿ ಸಹಪಾಠಿಗಳೇ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಕೃತ್ಯ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನಡೆದಿದ್ದು ಈ ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

ನಾಲ್ವರು ವಿದ್ಯಾರ್ಥಿಗಳು ಸಹಪಾಠಿ ವಿದ್ಯಾರ್ಥಿನಿಗೆ ಅಮಲು ಪದಾರ್ಥ ನೀಡಿ ಮೂಹಿಕ ಅತ್ಯಾಚಾರ‌ ನಡೆಸಿದ್ದಲ್ಲದೆ ಅದರ ವೀಡಿಯೋ ಚಿತ್ರೀಕರಣ ಮಾಡಿದ್ದು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಪುತ್ತೂರಿನಲ್ಲಿ  ಕಳೆದ ಕೆಲ ತಿಂಗಳ ಹಿಂದೆ ನಡೆದಿತ್ತೆನ್ನಲಾಗಿರುವ ಈ ಘಟನೆ ಸಾಮಾಜಿಕ ತಾಣದಲ್ಲಿ ಸುದ್ದಿಯಾಗುತ್ತಿದ್ದಂತೆ ಪೋಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ದಕ್ಷಿಣ ಕನ್ನಡ ಎಸ್‌ಪಿ ಬಿ.ಎಂ. ಲಕ್ಷ್ಮಿ ಪ್ರಸಾದ್ ಖುದ್ದು ಪ್ರಕರಣದ ಪರ ಕಾಳಜಿ ತೋರಿದ್ದು ಆರೋಪಿಗಳನ್ನು ಬಂಧಿಸಲು ಕ್ರಮ ತೆಗೆದುಕೊಂಡಿದ್ದಾರೆ.

ಖಾಸಗಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ವಿದ್ಯಾರ್ಥಿನಿಗೆ ಅಮಲು ಪದಾರ್ಥ ನೀಡಿ ಕಾಡಿಗೆ ಕರೆದೊಯ್ದು ಅಲ್ಲಿ ಆಕೆಯನ್ನು  ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ವೀಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದು ಇದೀಗ ಪೋಲೀಸರು ವಿಡಿಯೋ ಮಾಡಿದವರು ಹಾಗೂ ಅದನ್ನು ಶೇರ್ ಮಾಡುವವರ ತನಿಖೆ ಕೈಗೊಂಡಿದ್ದಾರೆ.

No Comments

Leave A Comment