Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಹಿರಿಯ ಕಾಂಗ್ರೆಸ್‌ ನಾಯಕ ಮೋತಿ ಲಾಲ್‌ ವೋರಾ ಹಂಗಾಮಿ ಎಐಸಿಸಿ ಅಧ್ಯಕ್ಷ

ಹೊಸದಿಲ್ಲಿ : 90ರ ಹರೆಯದ ಹಿರಿಯ ಕಾಂಗ್ರೆಸ್‌ ನಾಯಕ ಮೋತಿ ಲಾಲ್‌ ವೋರಾ ಅವರನ್ನು ಹಂಗಾಮಿ ಎಐಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

1928ರ ಡಿಸೆಂಬರ್‌ 20ರಂದು ಜನಿಸಿದ್ದ ವೋರಾ ಅವರು ಈ ಹಿಂದೆ ಎರಡು ಅವಧಿಯಲ್ಲಿ ಮಧ್ಯ ಪ್ರದೇಶ ಮುಖ್ಯಮಂತ್ರಿಗಳಾಗಿದ್ದರು.

ಇದಕ್ಕೆ ಮುನ್ನ ರಾಹುಲ್‌ ಗಾಂಧಿ ಅವರು, “ನಾನು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದೇನೆ; ಅಂತೆಯೇ ನಾನೀಗ ಪಕ್ಷದ ಅಧ್ಯಕ್ಷನಲ್ಲ; ಆದುದರಿಂದ ಪಕ್ಷ ಬೇಗನೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು’ ಎಂದು ರಾಹುಲ್‌ ಗಾಂಧಿ ತಮ್ಮ ಪಕ್ಷಕ್ಕೆ ಖಡಾಖಂಡಿತವಾಗಿ ಹೇಳಿದ್ದರು.

“ಕಾಂಗ್ರೆಸ್‌ ಪಕ್ಷ ಆದಷ್ಟು ಬೇಗನೆ ಹೊಸ ಅಧ್ಯಕ್ಷರನ್ನು ಚುನಾಯಿಸಬೇಕು; ನಾನಂತೂ ಆ ಪ್ರಕ್ರಿಯೆಯಲ್ಲಿ ಇಲ್ಲವೇ ಇಲ್ಲ; ಪಕ್ಷ ಇನ್ನಷ್ಟು ವಿಳಂಬಿಸದೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು ಎಂದು ರಾಹುಲ್‌ ಗಾಂಧಿ ಹೇಳಿರುವುದನ್ನು ಉಲ್ಲೇಖೀಸಿ ಎಎನ್‌ಐ ವರದಿ ಮಾಡಿತ್ತು.

No Comments

Leave A Comment