Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಬಸ್ ಪ್ರಯಾಣದ ವೇಳೆ ಹೃದಯಾಘಾತ: ಕಾರ್ಕಳ ಮಾಜಿ ಶಾಸಕ ಗೋಪಾಲ್ ಭಂಡಾರಿ ನಿಧನ

ಮಂಗಳೂರು: ಬಸ್ ಪ್ರಯಾಣದ ವೇಳೆ ಹೃದಯಾಘಾತವಾದ ಪರಿಣಾಮ ಕಾರ್ಕಳ ಮಾಜಿ ಶಾಸಕ ಗೋಪಾಲ್ ಭಂಡಾರಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನಿಂದ ಬಸ್ ನಲ್ಲಿ ಮಂಗಳೂರಿಗೆ ಆಗಮಿಸುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಕಾರ್ಕಳ ಮಾಜಿ ಶಾಸಕ ಗೋಪಾಲ್ ಭಂಡಾರಿ ನಿಧನರಾಗಿದ್ದಾರೆ. ಕುಟುಂಬದ ಮೂಲಗಳು ತಿಳಿಸಿರುವಂತೆ ಇಂದು ಮಧ್ಯಾಹ್ನ ಅವರು ಬೆಂಗಳೂರಿನಿಂದ ಹೊರಟಿದ್ದರು. ಬಸ್ ನಿಲ್ದಾಣ ತಲುಪಿದ ನಂತರವೂ ಗೋಪಾಲ್ ಭಂಡಾರಿ ಇಳಿಯದ್ದನ್ನು ಕಂಡ ನಿರ್ವಾಹಕರು ಪರೀಕ್ಷಿಸಿದ್ದು, ಈ ವೇಳೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೂಡಲೇ ಬಸ್ ನಿರ್ವಾಹಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.  ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.

ಇನ್ನು ಭಂಡಾರಿ ಸಾವಿಗೆ ಬಿಜೆಪಿ ನಾಯಕಿ, ಸಂಸದೆ ಶೋಭಾ ಕರಂದ್ಲಾಜೆ ಕಂಬನಿ ಮಿಡಿದಿದ್ದು, ಈ  ಬಗ್ಗೆ ಫೇಸ್ ಬುಕ್ ನಲ್ಲಿ ಬರೆದಿರುವ ಅವರು, ‘ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹೆಚ್.ಗೋಪಾಲ ಭಂಡಾರಿ ಹೃದಯಘಾತದಿಂದ ನಿಧಾರಾಗಿರುವುದು ಅತೀವ ದುಃಖವನ್ನುಂಟು ಮಾಡಿದೆ, ಭಗವಂತನು ಅವರಿಗೆ ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬರೆದಿದ್ದಾರೆ.

No Comments

Leave A Comment