Log In
BREAKING NEWS >
ಅಯೋಧ್ಯೆ ಪ್ರಕರಣ: ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ಮುಸ್ಲಿಂ ಅರ್ಜಿದಾರರ ವಿರೋಧ!....

ರಾಷ್ಟ್ರಮಟ್ಟದಲ್ಲಿ ‘ಕೈ’ಪಕ್ಷಕ್ಕೆ ಶಾಕ್ ಮೇಲೆ ಶಾಕ್! ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪಕ್ಷದ  ಹೀನಾಯ ಸೋಲಿನ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಭಾನುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ಮುಂಬೈ ಘಟಕದ ಮುಖ್ಯಸ್ಥ ಮಿಲಿಂದ್ ಡಿಯೋರಾ ಅವರು ರಾಹುಲ್ ಗಾಂಧಿಯನ್ನು ಭೇಟಿಯಾದ ಕೆಲವೇ ಗಂಟೆಗಳಲ್ಲಿ ಮುಂಬೈ ನಗರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಇದೀಗ ಸಿಂಧಿಯಾ ಸಹ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.

 

 

“ಜನರ ತೀರ್ಪನ್ನು ಅಂಗೀಕರಿಸುವುದು ಮತ್ತು ಹೊಣೆ ಹೊತ್ತುಕೊಳ್ಳುವುದು ನನ್ನ ಕರ್ತವ್ಯ, ನಾನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ.ಎಂದು ಸಿಂಧಿಯಾ ಟ್ವೀಟ್ ಮಾಡಿದ್ದಾರೆ.

ಈ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಮತ್ತು ಪಕ್ಷದ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ”ಅವರು ಹೇಳಿದರು.

No Comments

Leave A Comment