Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

150ನೇ ಗಾಂಧಿ ಜಯಂತಿ: 150 ಕಿ.ಮೀ ಪಾದಯಾತ್ರೆ ಮಾಡಲು ಬಿಜೆಪಿ ಸಂಸದರಿಗೆ ಪ್ರಧಾನಿ ಸೂಚನೆ

ನವದೆಹಲಿ: ಮಹಾತ್ಮಾ ಗಾಂಧಿಯವರ 150ನೇ ಜಯಂತಿ ಆಚರಣೆ ಸಂದರ್ಭದಲ್ಲಿ ತಮ್ಮ ಕ್ಷೇತ್ರದಲ್ಲಿ 150 ಕಿಲೋ ಮೀಟರ್ ಪಾದಯಾತ್ರೆ ಮಾಡಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಜೆಪಿ ಸಂಸದರಿಗೆ ಸೂಚಿಸಿದ್ದಾರೆ.

ಇಂದು ದೆಹಲಿಯಲ್ಲಿ ಬಿಜೆಪಿ ಸಂಸದರ ಜೊತೆ ನಡೆದ ಸಭೆಯಲ್ಲಿ ಪ್ರಧಾನಿ ಮೋದಿ, ಅಕ್ಟೋಬರ್ 2ರಿಂದ ಅಕ್ಟೋಬರ್ 31ರ ನಡುವೆ ಬಿಜೆಪಿ ಸಂಸದರು ಪ್ರತಿದಿನ 15 ಕಿಲೋ ಮೀಟರ್ ನಡೆದುಕೊಂಡು ಹೋಗಿ ಮಹಾತ್ಮಾ ಗಾಂಧಿ ಮತ್ತು ವಲ್ಲಭಬಾಯಿ ಪಟೇಲ್ ಅವರ ಜಯಂತಿಯನ್ನು ಅರ್ಥಬದ್ಧವಾಗಿ ಆಚರಿಸುವಂತೆ ಕರೆ ನೀಡಿದ್ದಾರೆ.

ರಾಜ್ಯಸಭಾ ಸದಸ್ಯರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸಿ ಬಿಜೆಪಿ ಸಂಘಟನೆಗಳು ದುರ್ಬಲವಾಗಿರುವ ಕ್ಷೇತ್ರಗಳಲ್ಲಿ ಸಂಚರಿಸಬೇಕೆಂದು ಮೋದಿ ಹೇಳಿರುವುದಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.

ಗ್ರಾಮಗಳ ಪುನರುಜ್ಜೀವನ, ಸ್ವಾವಲಂಬಿ, ಗಿಡ ನೆಡುವ ಅಭಿಯಾನ ಮತ್ತು ಶೂನ್ಯ ಬಜೆಟ್ ಕೃಷಿಗಳ ಮೇಲೆ ಈ ಯಾತ್ರೆ ಗಮನ ಹರಿಸುತ್ತದೆ ಎಂದು ಪ್ರಹ್ಲಾದ್ ಜೋಷಿ ಹೇಳಿದರು.

No Comments

Leave A Comment