Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 26ರ೦ದು ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಸೆಮಿಫೈನಲ್ ಸೆಣಸಾಟ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ವಿಲಿಯಮ್ಸನ್

ಮ್ಯಾಂಚೆಸ್ಟರ್: ವಿಶ್ವಕಪ್ ನ ಬಹು ನಿರೀಕ್ಷಿತ ಮೊದಲ ಸೆಮಿಫೈನಲ್ ಪಂದ್ಯಕ್ಕೆ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಅಂಗಳದಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಸಜ್ಜಾಗಿವೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲ್ಯಾಂಡ್ ಮೊದಲು ಬ್ಯಾಟಿಂಗ್  ಆಯ್ಕೆ ಮಾಡಿದೆ.

ಮ್ಯಾಂಚೆಸ್ಟರ್ ನಲ್ಲಿ ಲೀಗ್ ಹಂತದಲ್ಲಿ 5 ಪಂದ್ಯಗಳು ನಡೆದಿದ್ದು, ಈ ಐದೂ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡವೇ ಜಯಗಳಿಸಿದೆ. ಹಾಗಾಗಿ ಈ ಟಾಸ್ ಪ್ರಮುಖ ಪಾತ್ರವಹಿದೆ.

ಈ ಮಹತ್ವದ ಪಂದ್ಯಕ್ಕೆ ಭಾರತ ಬದಲಾವಣೆ ಮಾಡಿಕೊಂಡಿದ್ದು ಕುಲದೀಪ್ ಯಾದವ್ ಬದಲು ಯುಜುವೇಂದ್ರ ಚಾಹಲ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಕಿವೀಸ್ ಕೂಡ ಒಂದು ಬದಲಾವಣೆ ಮಾಡಿದ್ದು ಟಿಮ್ ಸೌಥಿ ಬದಲು ಲ್ಯೂಕಿ ಫರ್ಗುಸನ್ ಸ್ಥಾನ ಪಡೆದಿದ್ದಾರೆ.

ತಂಡಗಳು
ಭಾರತ: ವಿರಾಟ್ ಕೊಹ್ಲಿ (ನಾ), ರೋಹಿತ್ ಶರ್ಮ, ಕೆ.ಎಲ್.ರಾಹುಲ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಮಹೇಂದ್ರ ಸಿಂಗ್ ಧೋನಿ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ.

ನ್ಯೂಜಿಲ್ಯಾಂಡ್: ಕೇನ್ ವಿಲಿಯಮ್ಸನ್ (ನಾ), ಮಾರ್ಟಿನ್ ಗಪ್ಟಿಲ್, ಹೆನ್ರಿ ನಿಕೋಲ್ಸ್,  ರಾಸ್ ಟೇಲರ್, ಟಾಮ್ ಲ್ಯಾಂಥಮ್, ಜೇಮ್ಸ್ ನೀಶಮ್, ಕಾಲಿನ್ ಡಿ ಗ್ರಾಂಡ್ ಹೋಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲ್ಯೂಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

No Comments

Leave A Comment