Log In
BREAKING NEWS >
ಅಯೋಧ್ಯೆ ಪ್ರಕರಣ: ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ಮುಸ್ಲಿಂ ಅರ್ಜಿದಾರರ ವಿರೋಧ!....

ಉಡುಪಿ: ತುಳಸಿ ಹರಿಮಾಣವನ್ನು ತಲೆಯ ಮೇಲಿಟ್ಟು “ಡಂಗುರಾವ ಸಾರಿ ಹರಿಯ ” ದಾಸರಪದಕ್ಕೆ ನೃತ್ಯ

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಶಯನೀ ಏಕಾದಶಿಯ ಪ್ರಯುಕ್ತ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ತುಳಸಿ ಹರಿಮಾಣವನ್ನು ತಲೆಯ ಮೇಲಿಟ್ಟು “ಡಂಗುರಾವ ಸಾರಿ ಹರಿಯ ” ದಾಸರಪದಕ್ಕೆ ನೃತ್ಯ ಮಾಡಿದರು.

ಕೃಷ್ಣ ದೇವರಿಗೆ ರಾತ್ರಿ ಪೂಜೆ ಆದ ನಂತರ ಸೂರ್ಯವಾದ್ಯ, ನಾದಸ್ವರ, ಸಂಕೀರ್ತನೆ, ಸಂಗೀತ, ಭಾಗವತ ಪುರಾಣಗಳು ಚಂದ್ರಶಾಲೆಯಲ್ಲಿ ನಡೆದ ನಂತರ ದೇವರ ಎದುರಿನ ಮಂಟಪದಲ್ಲಿ ಸ್ವಾಮೀಜಿಯವರು ದೇವರಿಗೆ ಮಂಗಳಾರತಿ ಮಾಡಿ ತುಳಸಿ ಹರಿವಾಣವನ್ನು ತಲೆಯಲಿಟ್ಟು ನೃತ್ಯ ನಡೆಸಿ ಪ್ರದಕ್ಷಿಣೆ ಮಾಡುತ್ತಾರೆ .

ಈ ಸೇವೆಯು ಆಷಾಡ ಮಾಸದ ಶುಕ್ಲ ಏಕಾದಶಿಯಿಂದ ಕಾರ್ತೀಕ ಮಾಸದ ಶುಕ್ಲ ಏಕಾದಶಿಯವರೆಗೆ ಚಾತುರ್ಮಾಸದ 8 ಏಕಾದಶಿಗಳವರೆಗೂ ನಡೆಯುತ್ತದೆ.

No Comments

Leave A Comment