Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಸಚಿವ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

ಚಂಢೀಗಢ: ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರೊಂದಿಗೆ ತೀವ್ರತೆರನಾದ ಭಿನ್ನಾಭಿಪ್ರಾಯವನ್ನು ಹೊಂದಿದ್ದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಸಿಧು ಅವರು ತಮ್ಮ ರಾಜೀನಾಮೆ ಪತ್ರವನ್ನು ತಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಕಳುಹಿಸಿದ್ದು ಆ ಪತ್ರದಲ್ಲಿ ಜೂನ್ 10ರ ದಿನಾಂಕ ನಮೂದಾಗಿದೆ.

ಅಮರಿಂದರ್ ಸಿಂಗ್ ಅವರ ಸಚಿವ ಸಂಪುಟದಲ್ಲಿ ಸಿಧು ಅವರು ಸ್ಥಳೀಯಾಡಳಿತ, ಪ್ರವಾಸೋದ್ಯಮ, ಸಾಂಸ್ಕೃತಿಕ ವ್ಯವಹಾರ ಹಾಗೂ ಮ್ಯೂಸಿಯಂ ಖಾತೆಗಳನ್ನು ನಿಭಾಯಿಸುತ್ತಿದ್ದರು.

ತಮ್ಮ ರಾಜೀನಾಮೆ ಪತ್ರದ ಪ್ರತಿಯನ್ನು ಸಿಧು ಅವರು ತಮ್ಮ ಟ್ಟಿಟ್ಟರ್ ಖಾತೆಯಲ್ಲಿ ಇಂದು ಪ್ರಕಟಿಸಿದ್ದಾರೆ. ಮತ್ತು ಈ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರಿಗೆ ಸಲ್ಲಿಸುತ್ತಿರುವುದಾಗಿಯೂ ಸಿಧು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

 

 

View image on Twitter
No Comments

Leave A Comment