Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

ಕುಖ್ಯಾತ ರೌಡಿ ಕುಣಿಗಲ್ ಗಿರಿ ಬಂಧನ

ಬೆಂಗಳೂರು: ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಬಂಧನವಾಗಿದೆ.ಸೋಮವಾರ ತಡರಾತ್ರಿ ಬೆಂಗಳೂರು ಕೋರಮಂಗಲ ಪೋಲೀಸರುಗಿರಿಯನ್ನು ಬಂಧಿಸಿದ್ದಾರೆ.

ಹಲವು ಪ್ರಕರಣದಲ್ಲಿ ಬೇಕಾಗಿದ್ದ ಕುಣಿಗಲ್ ಗಿರಿ ಇತ್ತೀಚೆಗೆ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

ಕೋರಮಂಗಲದ ಪಬ್ ಒಂದರಲ್ಲಿ ಗಿರಿ ಇರುವುದರ ಕುರಿತು ಲಭಿಸಿದ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಪೋಲೀಸರು ಕಾರ್ಯಾಚರಣೆ ನಡೆಸಿ ಅವನನ್ನು ಬಂಧಿಸಿದ್ದಾರೆ.

ಕಳೆದ ತಿಂಗಳು ತನ್ನ ಹುಟ್ಟುಹಬ್ಬಕ್ಕಾಗಿ ಆಯೋಜಿಸಿದ ಪಾರ್ಟಿ ವೇಳೆ  ಸುಮಾರು 266 ನೃತ್ಯಗಾತಿಯರನ್ನು ನೃತ್ಯ ಕಾರ್ಯಕ್ರಮಕ್ಕೆ ಆಯೋಜಿಸಿದ್ದ. ಆ ವೇಳೆ ಪಬ್ ಮೇಲೆ ದಾಳಿ ನಡೆಸಿದ್ದ ಪೋಲೀಸರು ಯುವತಿಯರನ್ನು ರಕ್ಷಿಸಿದ್ದರು, ಆದರೆ ಕುಣಿಗಲ್ ಗಿರಿ ಅಲ್ಲಿಂದಲೂ ತಪ್ಪಿಸಿಕೊಂಡು ಪೋಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ.

No Comments

Leave A Comment