Log In
BREAKING NEWS >
ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ....ಅನಾಮಧೇಯ ವ್ಯಕ್ತಿ ಬ್ಯಾಗ್ ಇಟ್ಟಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಗೃಹ ಸಚಿವ ಬೊಮ್ಮಾಯಿ....

ಜಾಗತಿಕ ಉಗ್ರ ಹಫೀಝ್ ಸಯೀದ್ ಪಾಕಿನಲ್ಲಿ ಅಂದರ್

ಕರಾಚಿ: ಮುಂಬೈ ದಾಳಿಯ ರೂವಾರಿ ಮತ್ತು ಜಾಗತಿಕ ಉಗ್ರ ಹಫೀಝ್ ಸಯೀದ್ ನನ್ನು ಪಾಕಿಸ್ಥಾನ ಪಂಜಾಬ್ ಪೊಲೀಸ್ ಇಲಾಖೆಗೆ ಸೇರಿದ ಉಗ್ರನಿಗ್ರಹ ಇಲಾಖೆಯ ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಉಗ್ರ ಚಟುವಟಿಕೆಗಳಿಗೆ ಹಣಕಾಸು ಸಹಾಯ ನೀಡುತ್ತಿದ್ದ ಕಾರಣ ನೀಡಿ ಹಫೀಝ್ ಬಂಧನವಾಗಿದೆ ಎಂದು ತಿಳಿದುಬಂದಿದೆ.

ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಅವರು ದ್ವಿಪಕ್ಷೀಯ ಮಾತುಕತೆಗಾಗಿ ಅಮೆರಿಕಾಕ್ಕೆ ತೆರಳುವ ಒಂದು ದಿನ ಮುಂಚಿತವಾಗಿ ಈ ಬಂಧನ ನಡೆದಿರುವುದು ವಿಶೇಷವಾಗಿದೆ.

ಹಫೀಝ್ ಸಯೀದ್ ಲಾಹೋರ್ ನಿಂದ ಗುಜ್ರಾನ್ ವಾಲಾಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯದಲ್ಲೇ ಉಗ್ರನಿಗ್ರಹ ದಳದ ಅಧಿಕಾರಿಗಳು ಈ ಜಾಗತಿಕ ಉಗ್ರ ಸಂಚರಿಸುತ್ತಿದ್ದ ವಾಹನವನ್ನು ವಶಪಡಿಸಿಕೊಂಡು ಆತನನ್ನು ಬಂಧಿಸಿದರು ಎಂಬ ಮಾಹಿತಿ ಲಭ್ಯವಾಗಿದೆ. ಹಫೀಝ್ ನನ್ನು ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

No Comments

Leave A Comment