Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು

ಉಳ್ಳಾಲ : ಕೊಣಾಜೆ ಅಸೈಗೋಳಿ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಸವಾದ್ (23) ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆ ಆಸ್ಪತ್ರೆಯಲ್ಲಿ ಮೃತಪಟ್ಡಿದ್ದಾರೆ.

ಅಸೈಗೋಳಿಯ ಪುಲ್ಲು ನಿವಾಸಿ ಜಿಲ್ಲಾ ವಕ್ಫ್ ಸಮಿತಿ ಸದಸ್ಯ ಸುಲೈಮಾನ್ ಪುಲ್ಲು ಅವರ ಏಕೈಕ ಪುತ್ರನಾಗಿರುವ ಮಹಮ್ಮದ್ ಸವಾದ್ ಗುರುವಾರ ರಾತ್ರಿ ಕೊಣಾಜೆ ಕಡೆಯಿಂದ ಮಂಗಳೂರು ಕಡೆ ತನ್ನ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಮಂಗಳೂರು ಕಡೆಯಿಂದ ಕೊಣಾಜೆ ಕಡೆ ಸಂಚರಿಸುತ್ತಿದ್ದಾಗ ಬೈಕ್ ಹಠತ್ತಾನೆ ಅಡ್ಡ ಬಂದಾಗ ಸವಾದ್ ಬೈಕ್ ಡಿಕ್ಕಿ ಹೊಡೆದಿತ್ತು.  ಗಂಭೀರ ಗಾಯಗೊಂಡಿದ್ದ ಸವಾದ್ ನನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟರು.

ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಸವಾದ್ ತಾಯಿ, ತಂದೆ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

No Comments

Leave A Comment