Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

370ನೇ ವಿಧಿ ರದ್ದು: ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ ಬಂಧನ

ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಬಂಧಿಸಿ ತಾತ್ಕಾಲಿಕ ಜೈಲಿಗೆ ಸ್ಥಳಾಂತರಿಸಲಾಗಿದೆ.

ಭಾನುವಾರ ರಾತ್ರಿಯಿಂದ ಗೃಹಬಂಧನದಲ್ಲಿದ್ದ ಈ ಇಬ್ಬರೂ ನಾಯಕರನ್ನು ಇದೀಗ ಬಂಧಿಸಿ ಜೈಲಿಗೆ ಕಳಿಸಲಾಗಿದೆ.

 

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕಳೆದ ವಾರ ಕಾಶ್ಮೀರದಲ್ಲಿ ಸೇನಾ ಜಮಾವಣೆ ಪ್ರರಂಬವಾದಾಗಿನಿಂದಲೂ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದರು.ಭಾರತೀಯ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇಂದು  “ಕರಾಳ” ದಿನ ಎಂಬುದಾಗಿ ಕರೆದ್ ಮುಫ್ತಿ ತಮ್ಮ ಸರಣಿ ಟ್ವೀಟ್ ಮೂಲಕ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು.

No Comments

Leave A Comment