Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

ಉಡುಪಿ ಭಾರೀ ಗಾಳಿ, ಮಳೆ; ಯಾವ ಶಾಲಾ, ಕಾಲೇಜುಗಳಿಗೆ ರಜೆ

ಉಡುಪಿ/ಕಾರ್ಕಳ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳ ಶಾಲಾ ಕಾಲೇಜಿಗೆ ಬುಧವಾರ ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದ್ದು ಆಗಸ್ಟ್ 7 ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿಯವರೆಗೆ) ಬುಧವಾರ ರಜೆ ಘೋಷಣೆ ಮಾಡಲಾಗಿದೆ.

 

 

ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಮಹೇಶ್ಚಂದ್ರ ಅವರು ತಿಳಿಸಿದ್ದಾರೆ.

ಮೂಡಬಿದ್ರೆ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನ ಶಾಲಾ, ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ ಎಂದು ಕಾರ್ಕಳ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ಒಂದು ದಿನ ರಜೆ ನೀಡಲಾಗಿದೆ ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಘೋಷಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ, ಗುರುವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.

ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮಂಗಳವಾರ ನೀಡಲಾಗಿದ್ದ ರಜೆಯನ್ನು ಬುಧವಾರಕ್ಕೂ ವಿಸ್ತರಿಸಲಾಗಿದೆ.

ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ.

No Comments

Leave A Comment