Log In
BREAKING NEWS >
ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ....ಅನಾಮಧೇಯ ವ್ಯಕ್ತಿ ಬ್ಯಾಗ್ ಇಟ್ಟಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಗೃಹ ಸಚಿವ ಬೊಮ್ಮಾಯಿ....

ಬೆಳಗಾವಿ: ಪ್ರವಾಹದಲ್ಲಿ ಕೊಚ್ಚಿಹೋದ ಕಾರು, ನಾಲ್ವರು ನೀರು ಪಾಲಾಗಿರುವ ಶಂಕೆ

ಬೆಳಗಾವಿ: ಬೆಳಗಾವಿ ತಾಲೂಕಿನ ಸಂತಿಬಸ್ತವಾಡ್ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಸೇತುವೆ ದಾಟುತ್ತಿದ್ದ ಕಾರೊಂದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಕಾರಿನಲ್ಲಿದ್ದ ಮೂರು ಅಥವಾ ನಾಲ್ಕು ಮಂದಿ ನೀರು ಪಾಲಾಗಿರುವ ಶಂಕೆ ವ್ಯಕ್ತವಾಗಿದೆ.

ಕಾರಿನಲ್ಲಿದ್ದ ವ್ಯಕ್ತಿಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಪ್ರತ್ಯಕ್ಷದರ್ಶಿಗಳ ಪ್ರಕಾರ, ಸಂತಿಬಸ್ತವಾಡ್ ಗ್ರಾಮದ ನಿವಾಸಿಗಳು ಕಪ್ಪು ಬಣ್ಣದ ಕಾರಿನಲ್ಲಿ ತುಂಬಿ ಹರಿಯುತ್ತಿದ್ದ ಸೇತುವೆ ದಾಟಲು ಯತ್ನಿಸಿದರು. ಕಾರಿನ ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಯಿಂದ ಕೆಳಗೆ ಬಿದ್ದು, ಕೊಚ್ಚಿಕೊಂಡು ಹೋಗಿದೆ.

 

 

ಸೇತುವೆ ದಾಟದಂತೆ ಸ್ಥಳೀಯರು ಕಾರು ಚಾಲಕನಿಗೆ ಎಚ್ಚರಿಸಿದ್ದರು. ಆದರೆ ಕಾರು ಚಾಲಕ ಎಚ್ಚರಿಕೆಯನ್ನು ಕಡೆಗಣಿಸಿ ಸೇತುವೆ ದಾಟಲು ಯತ್ನಿಸಿದ ಪರಿಣಾಮ ಅವರು ಕಾರು ಸಮೇತ ಕೊಚ್ಚಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಶಾಮಕ ಸಿಬ್ಬಂದಿ ವಾಹನ ಹಾಗೂ ವ್ಯಕ್ತಿಗಳ ಶೋಧ ಕಾರ್ಯ ಆರಂಭಿಸಿದ್ದಾರೆ.

No Comments

Leave A Comment