Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

ಭಾರತೀಯ ವಾಯುಪಡೆ ಪೈಲಟ್ ಅಭಿನಂದನ್ ಗೆ ‘ವೀರ ಚಕ್ರ’ ಪ್ರಶಸ್ತಿ ಸಾಧ್ಯತೆ

ನವದೆಹಲಿ: ಫೆಬ್ರವರಿ 27 ರಂದು ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಪಾಕಿಸ್ತಾನದ ಎಫ್ -16 ಯುದ್ದವಿಮಾನ ಹೊಡೆದುರುಳಿಸಿದ್ದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್  ಅಭಿನಂದನ್ ವರ್ಧಮನ್ ಅವರಿಗೆ ವೀರ ಚಕ್ರ ಪ್ರಶಸ್ತಿಯನ್ನು ಸರ್ಕಾರ ಘೋಷಿಸುವ ಸಾಧ್ಯತೆ ಇದೆ.

ಐದು ಮಿರಾಜ್ -2000 ಯುದ್ಧ ವಿಮಾನಗಳು ಪಾಕಿಸ್ತಾನಕ್ಕೆ ನುಗ್ಗಿ ಅಲ್ಲಿನ ಉಗ್ರ ನೆಲೆಗಳನ್ನು ಧ್ವಂಸಗೊಳಿಸಿದ ನಂತರ ಪಾಕಿಸ್ತಾನದ ಎಫ್ -16 ಜೆಟ್ ವಿಮಾನ ಹೊಡೆದುರುಳಿದ ಶೌರ್ಯಕ್ಕಾಗಿ ವಾಯುಪಡೆಯ ಈ ಪದಕವನ್ನು ನೀಡಲಾಗುತ್ತಿದೆ.

 

 

ಫೆಬ್ರವರಿ 14 ರಂದು ನಡೆದ ಪುಲ್ವಾಮಾ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನಾಪಡೆ ಪಾಕಿಸ್ತಾನದ ಬಾಲಕೋಟ್ ನಲ್ಲಿ ಸರ್ಜಿಕಲ್ ದಾಳಿ ನಡೆಸಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಬಳಿಕ ಭಾರತೀಯ ವಾಯುಗಡಿ ದಾಟಿ ಬಂದ ಪಾಕಿಸ್ತಾನದ ಎಫ್- 16 ಯುದ್ಧ ವಿಮಾನ ಜೊತೆಗೆ ಕಾಳಗ ನಡೆಸಿದ್ದ ಅಭಿನಂದನ್ ಅದನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದರು.

ಆದಾದ ನಂತರ ಪ್ಯಾರಾಚೂಟ್ ಮೂಲಕ ಪಾಕಿಸ್ತಾನದ ನೆಲಕ್ಕೆ ಧುಮುಕ್ಕಿದ್ದ ಅವರನ್ನು ಅಲ್ಲಿನ ಸೇನೆ ಬಂಧಿಸಿತ್ತು. 60 ಗಂಟೆಗಳ ನಂತರ ಮಾರ್ಚ್ 1 ರಂದು ಭಾರತಕ್ಕೆ ವಾಪಸ್ ಕಳುಹಿಸಿತ್ತು.ವೀರಚಕ್ರ ಯೋಧರಿಗೆ ನೀಡಲಾಗುವ ಮೂರನೇಯ ಅತ್ಯುನ್ನತ ಪ್ರಶಸ್ತಿಯಾಗಿದೆ.

No Comments

Leave A Comment