Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

ಬ್ರಹ್ಮಾವರ: ಭಾರಿ ಮಳೆಗೆ ಪೇತ್ರಿಯಲ್ಲಿ ಗೋಡೆ ಕುಸಿದು ಮಹಿಳೆ ಸಾವು

ಬ್ರಹ್ಮಾವರ : ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಬ್ರಹ್ಮಾವರ ತಾಲೂಕಿನ ಪೇತ್ರಿಯಲ್ಲಿ ಗೋಡೆ ಕುಸಿದು ಮಹಿಳೆಯೋರ್ವರು  ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಗಂಗಾ ಮರಕಲ್ತಿ ಗೋಡೆ ಕುಸಿದು ಮೃತಪಟ್ಟ ಮಹಿಳೆ. ಗುರುವಾರ ಬೆಳಿಗ್ಗೆ ಗಂಗಾ ಅವರು ಹಾಲು ಕರೆಯುವಾಗ ಹಟ್ಟಿಯ ಗೋಡೆ ಕುಸಿದು ಬಿದ್ದಿತ್ತು. ಗೋಡೆಯ ಕಲ್ಲು ತಲೆಗೆ ಬಿದ್ದ ಕಾರಣ ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ಹೇಳಲಾಗಿದೆ.

ಕಳೆದ ಹಲವು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಕಾರಣ ಗೋಡೆ ಶಿಥಿಲವಾಗಿತ್ತು. ಸ್ಥಳಕ್ಕೆ ತಹಶೀಲ್ದಾರ್, ಗ್ರಾಮ ಪಂಚಾಯತ್ ಅಧ್ಯಕ್ಷರು ಭೇಟಿ ನೀಡಿದರು.

No Comments

Leave A Comment