Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

ವಯನಾಡು ಭೂಕುಸಿತಕ್ಕೆ 40 ಬಲಿ ಶಂಕೆ

ತಿರುವನಂತಪುರ/ನವದೆಹಲಿ: ದೇವರ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ವಯನಾಡ್‌ ಜಿಲ್ಲೆಯ ಮೆಪ್ಪಾಡಿ ಪುತುಮಾಲಾ ಎಂಬಲ್ಲಿ ಗುರುವಾರ ಸಂಜೆ ಉಂಟಾದ ಭೂಕುಸಿತದಲ್ಲಿ 40 ಜನರು ಸಿಲುಕಿದ್ದು, ಅವರಲ್ಲಿ ಮೂವರನ್ನು ರಕ್ಷಿಸಲಾಗಿದೆ. ದೇಗುಲ, ಮಸೀದಿ, ಚರ್ಚ್‌, ಪ್ಲಾಂಟೇಷನ್‌ ಕಂಪನಿಯ ನೌಕರರು ವಾಸಿಸುತ್ತಿದ್ದ ಮನೆಗಳ ಮೇಲೆ ಗುಡ್ಡ ಕುಸಿದ ಕಾರಣ ಈ ದುರಂತ ಸಂಭವಿಸಿದೆ.

ಕರ್ನಾಟಕದ ಮಡಿಕೇರಿಯಲ್ಲಿ ಭೂಮಿ ಕುಸಿದ ಮಾದರಿಯಲ್ಲಿಯೇ ಭೂಮಿ ಕುಸಿದಿರುವುದರ ಬಗ್ಗೆ ಮಲಯಾಳಂ ಸುದ್ದಿ ವಾಹಿನಿಗಳು ಕುಸಿತದ ದೃಶ್ಯಾವಳಿಗಳನ್ನು ಪ್ರಸಾರ ಮಾಡಿವೆ.

ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ಭರದಿಂದ ಸಾಗಿದೆ. ಕೇರಳದ ಇತರ ಭಾಗದಲ್ಲಿಯೂ ಉಂಟಾಗಿರುವ ಪ್ರವಾಹ ಸ್ಥಿತಿಯಿಂದಾಗಿ 9,500ಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ತಿರುವನಂತಪುರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಕೇರಳದಲ್ಲಿ ಮಳೆಯಿಂದಾಗಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ವಯನಾಡ್‌ನ‌ ನಿಲಂಬೂರ್‌ ಪಟ್ಟಣ ನೀರಿನಲ್ಲಿ ಮಳುಗಡೆಯಾಗಿದೆ.

ಮಲಪ್ಪುರಂ, ಕಲ್ಲಿಕೋಟೆ, ವಯನಾಡ್‌ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಈ ನಾಲ್ಕು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್‌ಡಿಆರ್‌ಎಫ್), ಸೇನೆಯ ನೆರವನ್ನು ಕೇರಳ ಸರ್ಕಾರ ಕೇಳಿದೆ.

No Comments

Leave A Comment