Log In
BREAKING NEWS >
ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ 91ನೇ ಭಜನಾ ಸಪ್ತಾಹ ಮಹೋತ್ಸವದ ನೇರಪ್ರಸಾರ ಕಾರ್ಯಕ್ರಮಕ್ಕೆ ಸಹಕರಿಸಿದ ದೇವಸ್ಥಾನದ ಆಡಳಿತ ಮ೦ಡಳಿಗೆ ಹಾಗೂ ಭಜನಾ ಸಪ್ತಾಹ ಮಹೋತ್ಸವದ ಸಮಿತಿಯವರಿಗೆ ಮತ್ತು ಜಾಹೀರಾತನ್ನು ನೀಡಿ ಸಹರಿಸಿದ ಎಲ್ಲಾ ಜಾಹೀರಾತುದಾರರಿಗೆ ಕರಾವಳಿ ಕಿರಣ ಡಾಟ್ ಬಳಗದ ವತಿಯಿ೦ದ ಧನ್ಯವಾದಗಳು ಹಾಗೂ ಏಳುದಿನಗಳ ನಮ್ಮ ಅ೦ತರ್ಜಾಲ ಪತ್ರಿಕೆಯನ್ನು ವೀಕ್ಷಿಸಿದ ಎಲ್ಲಾ ಓದುಗರಿಗೆ,ಅಭಿಮಾನಿಗಳಿಗೆ ಅಭಿನ೦ದನೆಗಳನ್ನು ಸಲ್ಲಿಸುತ್ತೇವೆ.

ಪ್ರವಾಹ ಪರಿಸ್ಥಿತಿಗೆ ಮಿಡಿದ ‘ಮಾತೃ ಹೃದಯಿ’ ಸುಧಾ ಮೂರ್ತಿ: ಸಿಎಂ ಪರಿಹಾರ ನಿಧಿಗೆ 10 ಕೋಟಿ ದೇಣಿಗೆ!

ಬೆಂಗಳೂರು: ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಕ್ಷಾಂತರ ಜನರು ಮನೆ ಮಠ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅಲ್ಲದೆ ಪರಿಹಾರಕ್ಕಾಗಿ ಎದುರು ನೋಡುತ್ತಿದ್ದು ಇದಕ್ಕೆ ಸ್ಪಂಧಿಸಿರುವ ಸುಧಾ ಮೂರ್ತಿ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ರುಪಾಯಿ ದೇಣಿಗೆ ನೀಡಿದ್ದಾರೆ.

ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾ ಮೂರ್ತಿ ಅವರು ಸಿಎಂ ಪರಿಹಾರ ನಿಧಿಗೆ 10 ಕೋಟಿ ರುಪಾಯಿ ದೇಣಿಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಿಳಿಸಿದ್ದಾರೆ.

ಕುಂದಾನಗರಿ ಬೆಳಗಾವಿಯಲ್ಲಿಂದು ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಾಣ ಮಾಡಿಕೊಡಲಾಗುವುದು, ಆಸ್ತಿ ನಷ್ಟವಾದವರಿಗೂ ಪರಿಹಾರ ನೀಡಲಾಗುವುದು, ಪ್ರವಾಹದಲ್ಲಿ ಮೃತರಾದವರಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.

No Comments

Leave A Comment