Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

ಅಸ್ಸಾಂ: ಐಎಎಫ್‌ ಸುಖೋಯ್ ಫೈಟರ್ ಜೆಟ್ ಅಪಘಾತ, ಪೈಲಟ್‌ಗಳು ಪಾರು

ತೇಜ್ಪುರ್(ಅಸ್ಸಾಂ): ಅಸ್ಸಾಂ ನ ತೇಜ್ಪುರ್ ಸಮೀಪ ಗುರುವಾರ ಸಂಜೆ ಸುಖೋಯ್ ವಿಮಾನ ಅಪಘಾತಕ್ಕೀಡಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ವಿಮಾನ ಅಪಘಾತದ ವೇಳೆ ವಿಮಾನದಲ್ಲಿದ್ದ ಇಬ್ಬರೂ ಪೈಲಟ್ ಗಳು ಸುರಕ್ಷಿತವಾಗಿದ್ದಾರೆ. ಘಟನೆ ಕುರಿತು ವಿಚಾರಣೆ ನಡೆಯಲಿದೆ ಎಂದು ಮೂಲಗಳು ಹೇಳಿದೆ.

 

 

ಗುರುವಾರ ಸಂಜೆ ತೇಜ್ಪುರದಲ್ಲಿ ನಿತ್ಯದ ತರಬೇತಿ ಹಾರಾಟ ನಡೆಸುತ್ತಿದ್ದ ಸುಖೋಯ್ -30 ಫೈಟರ್ ಜೆಟ್ ಅಪಘಾತಕ್ಕೀಡಾಗಿದೆ.ವಿಮಾನವು ತೇಜ್‌ಪುರದ ಮಿಲನ್‌ಪುರ ಪ್ರದೇಶದಲ್ಲಿ ಅಪಘಾತ ಸಂಭವಿಸಿದ ಕೂಡಲೇ ಬೆಂಕಿ ಕಾಣಿಸಿಕೊಂಡಿದೆ. ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ಅಪಘಾತ ಸಂಭವಿಸಿದೆ.

ಪೈಲಟ್‌ಗಳು ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಇವರಿಬ್ಬರನ್ನು ರಕ್ಷಿಸಿ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಕಳೆದ ಜೂನ್‌ನಲ್ಲಿ ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯಲ್ಲಿ ನಡೆದ ಐಎಎಫ್‌ನ ಸಾರಿಗೆ ವಿಮಾನ ಅಪಘಾತದ ಬಳಿಕ ಈ ಘಟನೆ ನಡೆದಿದೆ.

No Comments

Leave A Comment