Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸೀತಾರಾಮ್ ಯೆಚೂರಿ ಬಂಧನ

ಶ್ರೀನಗರ: ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಇಂದು ಬಂಧಿಸಲಾಗಿದೆ.

ಸಿಪಿಐ(ಎಂ) ಶಾಸಕ ಎಂವೈ ತಾರಿಗಾಮಿ ಆರೋಗ್ಯ ಸರಿಯಿಲ್ಲದ್ದ ಕಾರಣ ಅವರನ್ನು ಹಾಗೂ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡುವುದಾಗಿ ಆಡಳಿತಕ್ಕೆ ಮಾಹಿತಿ ನೀಡಿದ್ದರೂ  ಎಲ್ಲಿಯೂ ಹೋಗಲು ತಮ್ಮಗೆ ಅವಕಾಶ ನೀಡಲಿಲ್ಲ, ಈ ಅಕ್ರಮದ ಬಂಧನದ ವಿರುದ್ಧ ಪ್ರತಿಭಟನೆ ನಡೆಸಿದ್ದಾಗಿ ಅವರು ಟ್ವೀಟರ್ ನಲ್ಲಿ ಹೇಳಿದ್ದಾರೆ.

 

 

ಸಿಪಿಐ (ಎಂ) ಮುಖಂಡರಾದ ಯೂಸಫ್ ತಾರಿಗಾಮಿ ಹಾಗೂ ಇನ್ನಿತರ ಮುಖಂಡರ ಭೇಟಗಾಗಿ ಯೆಚೂರಿ ಹಾಗೂ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಇಂದು ಬೆಳಗ್ಗೆ ಶ್ರೀನಗರಕ್ಕೆ ತೆರಳಿದ್ದರು.

ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಯಾವುದೇ ತೊಂದರೆಯಾಗುವುದಿಲ್ಲ ಎಂಬ ಭರವಸೆ ಹೊಂದಿರುವುದಾಗಿ  ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರಿಗೆ ಯೆಚೂರಿ ಪತ್ರ ಬರೆದಿದ್ದರು.

ನಿನ್ನೆ ದಿನ ಶ್ರೀನಗರಕ್ಕೆ ತೆರಳಿದ ಕಾಂಗ್ರೆಸ್ ಮುಖಂಡ ಗುಲಾಮ್ ನಬೀ ಅಜಾದ್ ಅವರನ್ನು ವಿಮಾನ ನಿಲ್ದಾಣದಿಂದಲೇ ದೆಹಲಿಗೆ ವಾಪಸ್ ಕಳುಹಿಸಲಾಗಿತ್ತು.

No Comments

Leave A Comment